– 56 ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ
ಖಾರ್ಟೂಮ್: ಸುಡಾನ್‌ನಲ್ಲಿ (Sudan) ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ (Clash) ಉಂಟಾಗಿದ್ದು, ಪರಿಣಾಮ 56 ಜನರು ಸಾವನ್ನಪ್ಪಿದ್ದಾರೆ. 500ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ ಎಂದು ಸುಡಾನ್ ಕೇಂದ್ರ ಮಂಡಳಿ ತಿಳಿಸಿದೆ.
ಸುಡಾನ್ ಸೈನಿಕರ ಸಂಘರ್ಷದಲ್ಲಿ ಸಾವನ್ನಪ್ಪಿದವರ ಪೈಕಿ ಒಬ್ಬ ಭಾರತ ಮೂಲದ ವ್ಯಕ್ತಿಯೂ (Indian) ಸೇರಿದ್ದಾರೆ ಎಂದು ವರದಿಯಾಗಿದೆ. ಸುಡಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯನೊಬ್ಬ ಶನಿವಾರ ಗುಂಡು ತಗುಲಿ ಗಾಯಗೊಂಡಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿ ತಿಳಿಸಿದೆ.
Advertisement
Advertisement
ಸುಡಾನ್ ಸಂಘರ್ಷದಲ್ಲಿ ಸಾವನ್ನಪ್ಪಿರುವ ಭಾರತೀಯನ ಕುಟುಂಬಕ್ಕೆ ಸಹಾಯ ಮಾಡಲು ರಾಯಭಾರ ಕಚೇರಿ ಎಲ್ಲಾ ಪ್ರಯತ್ನ ಮಾಡುತ್ತಿದೆ. ಖಾರ್ಟೂಮ್‌ನಲ್ಲಿನ (Khartoum) ಪರಿಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ. ನಾವು ಈ ಬೆಳವಣಿಗೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಇದನ್ನೂ ಓದಿ: ಅತಿಕ್, ಅಶ್ರಫ್ ಹತ್ಯೆ – ಮೂವರು ಹಂತಕರ ಬಂಧನ, ಯುಪಿಯಲ್ಲಿ ಹೈ ಅಲರ್ಟ್
Advertisement
ಸುಡಾನ್‌ನ ರಾಜಧಾನಿ ಖಾರ್ಟೂಮ್‌ನಲ್ಲಿ ಸೇನೆ ಹಾಗೂ ಅರೆಸೈನಿಕ ಪಡೆಯ ನಡುವೆ ಅಧಿಕಾರಕ್ಕೆ ಸಂಬಂಧಪಟ್ಟಂತೆ ಸಂಘರ್ಷ ಉಂಟಾಗಿದೆ. ಮಿಲಿಟರಿ ಆಡಳಿತದ ವಿರುದ್ಧ ಅರೆಸೇನಾಪಡೆ ದಂಗೆ ಎದ್ದಿದ್ದು, ಖಾರ್ಟೂಮ್‌ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಧ್ಯಕ್ಷರ ನಿವಾಸವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಈ ಹಿನ್ನೆಲೆ ಎರಡೂ ಕಡೆಗಳಿಂದ ಗುಂಡಿನ ಚಕಮಕಿ ನಡೆದಿದೆ.
Advertisement
ಶನಿವಾರ ಬೆಳಗ್ಗೆ ಸಂಘರ್ಷ ಸ್ವಲ್ಪ ಮಟ್ಟಿನಲ್ಲಿ ಪ್ರಾರಂಭವಾಗಿದ್ದು, ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುಂಡಿನ ದಾಳಿಗೆ ತುತ್ತಾದವರಲ್ಲಿ ಅಮಾಯಕ ನಾಗರಿಕ ಸಂಖ್ಯೆಯನ್ನು ಮಾತ್ರವೇ ಪ್ರಕಟಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಆರ್‌ಸಿಬಿ, ಚೆನ್ನೈ ಮ್ಯಾಚ್ – ಟಿಕೆಟ್‍ಗಾಗಿ ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಚಾರ್ಜ್