Wednesday, 18th July 2018

ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಬೈಕ್ ಭಸ್ಮ!

ಮಂಡ್ಯ: ಬೈಕಿನಲ್ಲಿ ದಂಪತಿಯು ಆಸ್ಪತ್ರೆಗೆ ಹೋಗುತ್ತಿದ್ದಾಗ ಇದ್ದಕ್ಕಿದಂತೆ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿರುವ ಘಟನೆ ಪಾಂಡವಪುರದಲ್ಲಿ ನಡೆದಿದೆ.

ಶ್ಯಾದನಹಳ್ಳಿಯ ಸುನೀಲ್, ತನ್ನ ಪತ್ನಿಯೊಂದಿಗೆ ಆಸ್ಪತ್ರೆಗೆ ಬಂದು ತೋರಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಇದ್ದಕ್ಕಿದ್ದಂತೆ ಬೈಕಿನಿಂದ ಹೊಗೆ ಬರಲಾರಂಭಿಸಿದೆ, ಕೂಡಲೇ ಇಬ್ಬರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೈಕ್ ಇಂಜಿನ್‍ನಲ್ಲಿ ತಾಂತ್ರಿಕ ದೋಷದ ಕಾರಣದಿಂದ ಬೆಂಕಿ ಹತ್ತಿಕೊಂಡು, ಸುಮಾರು ಐದು ನಿಮಿಷ ಉರಿದಿದೆ. ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ ನೀರನ್ನು ಹಾಕಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *