Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಾಸನದಲ್ಲಿ ಹಠಾತ್‌ ಸಾವು| 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು: ದಿನೇಶ್‌

Public TV
Last updated: July 10, 2025 8:03 pm
Public TV
Share
4 Min Read
Dinesh Gundurao 1
SHARE

– ಆತಂಕ ಬೇಡ, ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಕಾಳಜಿ ಅಗತ್ಯ
– ಹಾಸನದಲ್ಲಿ ಹಠಾತ್ ಸಾವುಗಳ ಕುರಿತು ತನಿಖಾ ವರದಿ ಬಿಡುಗಡೆ

ಬೆಂಗಳೂರು: ಹಾಸನ (Hassana) ಜಿಲ್ಲೆಯಲ್ಲಿ ಇತ್ತೀಚೆಗೆ ಯುವ ವಯಸ್ಕರಲ್ಲಿ ಹೆಚ್ಚುತ್ತಿರುವ ಹಠಾತ್ ಸಾವುಗಳನ್ನು (Heart Attack) ಕುರಿತು ಸಾರ್ವಜನಿಕ ಮತ್ತು ಮಾಧ್ಯಮ ವಲಯದಲ್ಲಿ ವ್ಯಾಪಕ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಔಪಚಾರಿಕ ತನಿಖೆಗೆ ಆದೇಶಿಸಿತ್ತು ಇದೀಗ ಅದರ ಸಂಪೂರ್ಣ ವರದಿ ಬಂದಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ (Dinesh Gundu Rao) ಅವರು ತಿಳಿಸಿದರು.

ನಗರದ ಜಯದೇವ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ ರಚಿಸಲಾದ ಸಮಿತಿಯು, ಮೇ-ಜೂನ್ 2025ರ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ 24 ಸಾವುಗಳನ್ನು ವಿಶ್ಲೇಷಿಸುವ ಮತ್ತು ಜಿಲ್ಲೆಯಲ್ಲಿ ಹೃದಯ ಸಂಬಂಧಿ ಪ್ರಕರಣಗಳು ಹಾಗೂ ಸಾವುಗಳ ಕುರಿತು ಅಧ್ಯಯನ ಕುರಿತ ವರದಿಯನ್ನು ಇಂದು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಸಚಿವರು ತನಿಖೆಗೆ ಒಳಪಡಿಸಿದ 24 ಸಾವುಗಳಲ್ಲಿ, 14 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೆ, 10 ಮಂದಿ 45 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ, ಒಟ್ಟು 24 ಸಾವುಗಳಲ್ಲಿ, 4 ಸಾವುಗಳು ಹೃದಯ ಸಂಬಂಧಿ ಸಮಸ್ಯೆಯಿಂದ ಸಂಭವಿಸಿಲ್ಲ. ಅವುಗಳಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ, ರಸ್ತೆ ಅಪಘಾತ, ತೀವ್ರ ಜಠರಗರುಳಿನ ಸೋಂಕು (ಸೋಂಕು) ಮತ್ತು ವಿದ್ಯುತ್ ಆಘಾತದಿಂದ ಒಂದು ಸಾವು ಸಂಭವಿಸಿದೆ ಎಂದರು.

ಉಳಿದ 20 ಸಾವುಗಳಲ್ಲಿ, 10 ಸಾವುಗಳು ದೃಢಪಟ್ಟ ಹೃದಯ ಸಂಬಂಧಿ ಸಾವುಗಳಾಗಿವೆ. 3 ಮಂದಿಗೆ ಈಗಾಗಲೇ ಹೃದಯ ಕಾಯಿಲೆ ಇತ್ತು, ಒಬ್ಬರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಒಬ್ಬರು ಆಂಜಿಯೋಪ್ಲ್ಯಾಸ್ಟಿ ನಂತರ ಒಬ್ಬರು ಡೈಲೇಟೆಡ್ ಕಾರ್ಡಿಯೊಮಯೋಪತಿ (ಹೃದಯ ವೈಫಲ್ಯ) ಹೊಂದಿದ್ದರು. 7 ಹೃದಯ ಸಂಬಂಧಿ ಸಾವುಗಳಲ್ಲಿ 4 ಮರಣೋತ್ತರ ಪರೀಕ್ಷೆಗಳಿಂದ ದೃಢಪಟ್ಟಿವೆ ಮತ್ತು 3 ಇಸಿಜಿ ಆಧಾರಿತವಾಗಿವೆ. ಇನ್ನುಳಿದ 10 ಸಾವುಗಳು ‘ಸಂಭವನೀಯ ಹೃದಯ ಸಂಬಂಧಿ ಸಾವುಗಳು’ ಎಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು.

ಮೃತರಾದವರಲ್ಲಿ 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ಅಪಾಯಕಾರಿ ಅಂಶಗಳನ್ನು ಹೊಂದಿದ್ದರು. ಇವುಗಳಲ್ಲಿ ಮಧುಮೇಹ , ಸ್ಥೂಲಕಾಯತೆ, ಮದ್ಯಪಾನ,ಧೂಮಪಾನ, ಅಧಿಕ ರಕ್ತದೊತ್ತಡದಿಂದ ಸಾವನ್ನಪ್ಪಿದ್ದಾರೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಹಾಸನ ಸರಣಿ ಹೃದಯಾಘಾತದ ವರದಿ ಬಹಿರಂಗ – ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಯಾಬ್‌ ಚಾಲಕರು!

19, 21, 23, 32, 37, 38, ಮತ್ತು 43 ವರ್ಷ ವಯಸ್ಸಿನ ಯುವ ವ್ಯಕ್ತಿಗಳಲ್ಲಿ ಹಠಾತ್ ಸಾವುಗಳು ಸಂಭವಿಸಿರುವುದು ಕಳವಳಕಾರಿಯಾಗಿದೆ ಮತ್ತು ಇದನ್ನು ನಿರ್ಲಕ್ಷಿಸಲಾಗುವುದಿಲ್ಲ ಅದರಲ್ಲಿ 6 ಜನ ಆಟೋ ಮತ್ತು ಕ್ಯಾಬ್ ಚಾಲಕರಿದ್ದು ಸರಿಯಾದ ಸಮಯದಲ್ಲಿ ಊಟ ಮಾಡದೆ ಇರುವುದು, ಸರಿಯಾಗಿ ನಿದ್ರೆ ಮಾಡದೇ ಇರುವದು, ಒತ್ತಡದಲ್ಲಿ ಕೆಲಸ ಮಾಡುವುದು ಹಠಾತ್ ಸಾವಿಗೆ ಕಾರಣವಾಗಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದರು.

Increase in number of heart attack cases in Hassan Government forms special committee to investigate

ಅನೇಕ ಸಂದರ್ಭಗಳಲ್ಲಿ ಮೃತಪಟ್ಟವರನ್ನು ಸಾವಿಗೂ ಮುನ್ನ ಯಾವುದೇ ಆರೋಗ್ಯ ಸೌಲಭ್ಯಕ್ಕೆ ಕರೆತರಲಾಗಿಲ್ಲ. ಆಸ್ಪತ್ರೆಗಳಲ್ಲಿ ‘ಮೃತಪಟ್ಟವರು’ ಎಂದು ಘೋಷಿಸಿದವರಲ್ಲಿಯೂ ಸಹ, ಔಪಚಾರಿಕ ಮರಣೋತ್ತರ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸಲಾಗಿಲ್ಲ. ಮರಣೋತ್ತರ ದತ್ತಾಂಶದ ಕೊರತೆ, ಅಗತ್ಯ ಕ್ಲಿನಿಕಲ್ ತನಿಖೆಗಳ ಅಲಭ್ಯತೆ (ಇಸಿಜಿಗಳು, ಕಾರ್ಡಿಯಾಕ್ ಎಂಜೈಮ್‌ಗಳು), ಮತ್ತು ಕುಟುಂಬ ಸದಸ್ಯರಿಂದ ಸೀಮಿತ ಸಹಕಾರವು ಸಾವಿನ ನಿರ್ದಿಷ್ಟ ಕಾರಣವನ್ನು ತಿಳಿಯಲು ಕಷ್ಟಕರವಾಗಿದೆ ಎಂದರು.

ಶಾಲೆ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜಿಮ್‌ಗಳಲ್ಲಿನ ದೈಹಿಕ ತರಬೇತುದಾರರಂತಹ ನಿರ್ದಿಷ್ಟ ಗುಂಪುಗಳಿಗೆ ಸಿಪಿಆರ್ ತರಬೇತಿ ನೀಡಲಾಗುವುದು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC) ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ (CHC) ಹೃದಯ ಜ್ಯೋತಿ ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು.

ಆಟೋ ಮತ್ತು ಕ್ಯಾಬ್ ಚಾಲಕರಿಗೆ ತಪಾಸಣೆ ಮಾಡಿಸಲು ನಿರ್ಧರಿಸಲಾಗುವುದು.ಇದು ಹಾಸನ ಜಿಲ್ಲೆಯ ಒಂದು ಪ್ರತ್ಯೇಕ ಸಮಸ್ಯೆ ಏನಲ್ಲ ಇಂದಿನ ಜೀವನ ಶೈಲಿ, ಸರಿಯಾದ ಸಮಯದಲ್ಲಿ ಊಟ ಮಾಡದೆ ಇರುವುದು, ಸರಿಯಾಗಿ ನಿದ್ರೆ ಮಾಡದೇ ಇರುವದು, ಒತ್ತಡದಲ್ಲಿ ಕೆಲಸ ಮಾಡುವುದು ಹಠಾತ್ ಸಾವಿಗೆ ಕಾರಣವಾಗಿದೆ ಎಂದರು.

15 ವರ್ಷದ ಮಕ್ಕಳಿಗೆ ತಪಾಸಣೆ ಮಾಡಲಾಗುವುದು ಇದರಿಂದ ವಂಶವಾಹಿಯಾಗಿ ಏನಾದರೂ ಸಮಸ್ಯೆ ಇದ್ದರೆ ಗುರುತಿಸಿ ಸೂಕ್ತ ಕ್ರಮ ಕೈಗೊಂಡು ಮಾರ್ಗದರ್ಶನ ನೀಡಿ, ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಜೀವನಶೈಲಿ ಬದಲಾವಣೆಗೆ ಒತ್ತು
ಆಧುನಿಕ ಜೀವನಶೈಲಿಯ ಪರಿಣಾಮಗಳನ್ನು ಎತ್ತಿ ತೋರಿಸಿದೆ. ಒತ್ತಡದ ಕೆಲಸ, ನಿದ್ರಾಹೀನತೆ, ಅನಿಯಮಿತ ಊಟ, ಮತ್ತು ತಪ್ಪು ಆಹಾರ ಪದ್ಧತಿಗಳು ಹೃದಯ ಸಂಬಂಧಿ ಸಮಸ್ಯೆಗಳಿಗೆ ಪ್ರಮುಖ ಕಾರಣಗಳಾಗಿವೆ. ಧೂಮಪಾನ, ಮದ್ಯಪಾನ, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಸ್ಥೂಲಕಾಯತೆಗಳು ಅಪಾಯವನ್ನು ಮತ್ತಷ್ಟು ಹೆಚ್ಚಿಸುತ್ತವೆ.
ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಅನಿವಾರ್ಯ. ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ ಸೇವನೆ, ಸಾಕಷ್ಟು ನಿದ್ರೆ ಮತ್ತು ಒತ್ತಡ ನಿರ್ವಹಣೆಗೆ ಒತ್ತು ನೀಡಬೇಕು. ಇದು ಹಾಸನಕ್ಕೆ ಮಾತ್ರ ಸೀಮಿತವಲ್ಲ, ಬದಲಿಗೆ ಇಡೀ ಸಮಾಜಕ್ಕೆ ಅನ್ವಯವಾಗುವ ಸಂದೇಶ. ಆರೋಗ್ಯಕರ ಜೀವನಶೈಲಿಯ ಮೂಲಕ ಹಠಾತ್ ಸಾವುಗಳನ್ನು ತಡೆಗಟ್ಟಲು ನಾವೆಲ್ಲರೂ ಜಾಗೃತರಾಗಬೇಕು ಎಂದು ಸಚಿವರು ತಿಳಿಸಿದರು.

TAGGED:dinesh gundu raohassanaheart attackದಿನೇಶ್ ಗುಂಡೂರಾವ್ಹಾಸನಹೃದಯಾಘಾತ
Share This Article
Facebook Whatsapp Whatsapp Telegram

You Might Also Like

Tejasvi Surya
Chikkamagaluru

ಕಾಗಕ್ಕ, ಗುಬ್ಬಕ್ಕ ಕತೆ ಬಿಟ್ಟು ಸೀರಿಯಸ್ ರಾಜಕೀಯ ಮಾಡ್ರಿ – ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

Public TV
By Public TV
20 minutes ago
Davanagere Suicide
Bellary

ಪ್ರಿಯತಮೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ ಆರೋಪ – ಹೆದರಿ ಯುವಕ ಆತ್ಮಹತ್ಯೆ

Public TV
By Public TV
23 minutes ago
CRIME
Crime

ಮಂಡ್ಯ | ಚಾಕೊಲೇಟ್ ಆಸೆ ತೋರಿಸಿ 4 ವರ್ಷದ ಮಗುವಿನ ಮೇಲೆ ರೇಪ್

Public TV
By Public TV
1 hour ago
Sivaganga custodial torture case Five policemen arrested victims body bore over 30 injury marks
Crime

ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

Public TV
By Public TV
2 hours ago
Calcutta IIM
Crime

ಕೋಲ್ಕತ್ತಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್; ನನ್ನ ಮಗಳ ಮೇಲೆ ಅತ್ಯಾಚಾರ ಆಗಿಲ್ಲ – ಸಂತ್ರಸ್ತೆ ಅಪ್ಪನ ಅಚ್ಚರಿ ಹೇಳಿಕೆ!

Public TV
By Public TV
2 hours ago
FDA Koppal
Koppal

ಕೊಪ್ಪಳ; ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಫ್‌ಡಿಎ ಚಿಕಿತ್ಸೆ ಫಲಿಸದೇ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?