ಕಿಚ್ಚ ಸುದೀಪ್ (Sudeep) ಮತ್ತು ನಿರ್ಮಾಪಕ ಎನ್.ಕುಮಾರ್ (N. Kumar) ನಡುವಿನ ವಿವಾದ ಇದೀಗ ತಾರ್ಕಿಕ ಅಂತ್ಯ ಕಾಣುವ ಲಕ್ಷಣಗಳು ಕಾಣುತ್ತಿವೆ. ಇಂದು ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ರವಿಚಂದ್ರನ್ (Ravichandran) ನಿವಾಸದಲ್ಲಿ ಸಂಧಾನ ಸಭೆ ನಡೆಯುತ್ತಿದ್ದು ಸುದೀಪ್, ಕುಮಾರ್, ಶಿವರಾಜ್ ಕುಮಾರ್ (Shivaraj Kumar), ರಾಕ್ ಲೈನ್ ವೆಂಕಟೇಶ್, ಭಾ.ಮಾ ಹರೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಎನ್.ಕುಮಾರ್ ಈ ಹಿಂದೆ ಪ್ರತ್ಯೇಕವಾಗಿ ರವಿಚಂದ್ರನ್ ಮತ್ತು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದರು. ಸುದೀಪ್ ಮತ್ತು ತಮ್ಮ ನಡುವಿನ ಮನಸ್ತಾಪವನ್ನು ಬಗೆ ಹರಿಸುವಂತೆ ವಿನಂತಿಸಿಕೊಂಡಿದ್ದರು. ತಮಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಿ ಎಂದು ಅವರು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ:‘ಸಲಾರ್’ ಪಾರ್ಟ್ 2 ಬರೋದು ಪಕ್ಕಾ- ಬಾಯ್ಬಿಟ್ಟ ಜಗಪತಿ ಬಾಬು
ಈ ನಡುವೆ ಕುಮಾರ್ ವಿರುದ್ಧ ಸುದೀಪ್ ಕೋರ್ಟ್ ಮೆಟ್ಟಿಲು ಏರಿದ್ದರಿಂದ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತ್ತು. ತಾವು ಯಾವುದೇ ಸಂಧಾನಕ್ಕೆ ಬರುವುದಿಲ್ಲ ಕೋರ್ಟ್ ನಲ್ಲೇ ನ್ಯಾಯ ಸಿಗಲಿ ಎಂದು ಸುದೀಪ್ ಹೇಳಿಕೆ ನೀಡಿದ್ದರು. ಈ ಮಾತಿನ ಬೆನ್ನಲ್ಲೇ ಕುಮಾರ್ ವಾಣಿಜ್ಯ ಮಂಡಳಿಯ ಮುಂದೆ ಧರಣೆಗೆ ಕೂತಿದ್ದರು.
ರವಿಚಂದ್ರನ್ ಅವರ ಮಾತಿನಂತೆ ಪ್ರತಿಭಟನೆಯಿಂದ ಹಿಂದೆ ಸರಿದಿದ್ದ ಕುಮಾರ್, ಆನಂತರ ಶಿವರಾಜ್ ಕುಮಾರ್ ಅವರನ್ನೂ ಭೇಟಿ ಮಾಡಿದ್ದರು. ಇದೀಗ ರವಿಚಂದ್ರನ್ ಇಬ್ಬರನ್ನೂ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಭೆಯ ನಂತರ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕು.
Web Stories