ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ನಿವಾಸಕ್ಕೆ ನಟ ಸುದೀಪ್ (Sudeep) ಭೇಟಿ ನೀಡಿದ್ದಾರೆ. ಈ ವೇಳೆ ಸುಮಾರು ಅರ್ಧ ಗಂಟೆಗಳಿಗೂ ಹೆಚ್ಚಿನ ಕಾಲ ಗೃಹ ಸಚಿವರೊದಿಗೆ ಅವರು ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ತೆರಳಿದ್ದಾರೆ.
ಇನ್ನು ಸುದೀಪ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಜಿ.ಪರಮೇಶ್ವರ್, ಚಲನಚಿತ್ರ ಉದ್ಯಮದವರೆಲ್ಲ ಸೇರಿ ಕ್ರಿಕೆಟ್ ಮ್ಯಾಚ್ ಆಡುವ ಸಂಬಂಧ ಆಹ್ವಾನ ಕೊಡಲು ಬಂದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!
23, 24 ಹಾಗೂ 25ರಂದು ಮೂರು ದಿನಗಳ ಕಾಲ ಕ್ರಿಕೆಟ್ (Cricket) ಪಂದ್ಯಾವಳಿಗಳು ಆಡಲಿದ್ದಾರೆ. ಇದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟರ್ಸ್ ಕೂಡ ಭಾಗಿಯಾಗುತ್ತಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬರಬೇಕು ಎಂದು ಆಹ್ವಾನ ನೀಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಲೋಕಸಭೆ ಸ್ಪರ್ಧೆ ಬಗ್ಗೆ ಖರ್ಗೆಯವರೇ ತೀರ್ಮಾನಿಸಬೇಕು: ಪರಮೇಶ್ವರ್