ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೀ ತಮಿಳು ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದರು. ಈ ವೇಳೆ ಅವರಿಗೆ ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸದ್ಯ ಸುದೀಪ್ ಅವರಿಗೆ ಈ ಪ್ರಶಸ್ತಿ ಸಿಕ್ಕಿದ್ದು, ಇದರಿಂದ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.
Advertisement
ಸಾಮಾನ್ಯವಾಗಿ ಸುದೀಪ್ ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಆದರೆ ಈಗ ಅವರು ತಮಿಳಿನ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಅವರ ಅಭಿಮಾನಿಗಳಿಗೆ ಶಾಕ್ ಜೊತೆ ಖುಷಿ ಕೂಡ ಆಗಿದೆ. ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದೀಪ್ ತಮ್ಮ ಅನುಭವವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡರು.
Advertisement
Attendeding an event to receive an award after years was a weird feeling. Felt happy too.
Wired cz I'm used to life wthout awards n here iam altering my decisions for a friend of mine.
Felt happy cz my presence made a few very happy.
Thank u @ZeeKannada @vishvamukhi
For th honour pic.twitter.com/vzSE7McGRp
— Kichcha Sudeepa (@KicchaSudeep) January 5, 2020
Advertisement
ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ, ಹಲವು ವರ್ಷಗಳ ನಂತರ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸ್ವಲ್ಪ ವಿಚಿತ್ರ ಎನಿಸಿತು. ಜೊತೆಗೆ ಖುಷಿ ಕೂಡ ಆಯಿತು. ನಾನು ನನ್ನ ಸ್ನೇಹಿತನಿಗಾಗಿ ಈ ನಿರ್ಧಾರವನ್ನು ಬದಲಾಯಿಸಿದ್ದೇನೆ. ನಾನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕೆಲವರಿಗೆ ಖುಷಿಯಾಗಿದೆ. ಜೊತೆಗೆ ನನಗೂ ಖುಷಿ ಆಯ್ತು ಎಂದು ಟ್ವೀಟ್ ಮಾಡಿದ್ದಾರೆ.
Advertisement
ಸುದೀಪ್ ಪ್ರಶಸ್ತಿ ಪಡೆದಿದ್ದಕ್ಕೆ ನಿರ್ದೇಶಕ ಕೃಷ್ಣ, ನಿರ್ಮಾಪಕಿ ಸ್ವಪ್ನ ಕೃಷ್ಣ, ರವಿಶಂಕರ್ ಗೌಡ, ರಘುರಾಮ್ ಸೇರಿದಂತೆ ಹಲವು ಅಭಿಮಾನಿಗಳು ರೀ-ಟ್ವೀಟ್ ಮಾಡುವ ಮೂಲಕ ಶುಭ ಕೋರುತ್ತಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬೋನಿ ಕಪೂರ್, ಧನುಷ್, ಕಮಲ್ ಹಾಸನ್, ನಯನತಾರಾ, ಸುಹಾಸಿನಿ, ನಿವಿನ್ ಪೌಲ್, ಶ್ರೇಯಾ ಘೋಷಾಲ್, ವಿಜಯ್ ಸೇತುಪತಿ, ಸಮಂತಾ ಅಕ್ಕಿನೇನಿ ಸೇರಿದಂತೆ ಹಲವು ಕಲಾವಿದರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ನಟರಾದ ವಿಜಯ್ ಸೇತುಪತಿ, ಧನುಷ್ ಹಾಗೂ ನಟಿ ನಯನತಾರಾ ಕೂಡ ಪ್ರಶಸ್ತಿಯನ್ನು ಪಡೆದರು.