ಕಿಚ್ಚ ಸುದೀಪ್ ಇಂದು ರಾಯಚೂರಿನ ಸಿರಿವಾರ ತಾಲೂಕಿನ ಕುರಕುಂದದಲ್ಲಿ ಮಹರ್ಷಿ ವಾಲ್ಮೀಕಿ ಮತ್ತು ವೀರ ಮದಕರಿ ನಾಯಕ ಪ್ರತಿಮೆಗಳ ಅನಾವಣರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರ ಮೂರ್ತಿಯನ್ನು ಅನಾವರಣ ಮಾಡಬೇಕು ಎನ್ನುವುದು ಅಭಿಮಾನಿಗಳ ಆಗ್ರಹವಾಗಿತ್ತು. ಆದರೆ, ಅದು ಈಡೇರಲಿಲ್ಲ. ಇದನ್ನೂ ಓದಿ : ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ
Advertisement
ಮಹರ್ಷಿ ವಾಲ್ಮೀಕಿ ಮತ್ತು ವೀರ ಮದಕರಿ ನಾಯಕರ ಪ್ರತಿಮೆಯನ್ನು ಅನಾವರಣ ಮಾಡಿದ ಸುದೀಪ್, ತಮ್ಮ ಮೂರ್ತಿಯನ್ನು ಅನಾವರಣ ಮಾಡುವುದಕ್ಕೆ ಒಪ್ಪಲಿಲ್ಲ. ಹಾಗಂತ ಅಭಿಮಾನಿಗಳಿಗೆ ಅವಮಾನ ಮಾಡಲಿಲ್ಲ. ಪ್ರೀತಿಯನ್ನು ಮೂರ್ತಿಯನ್ನು ಪ್ರತಿಷ್ಠಾಪಿಸಲು ಹೊರಟವರಿಗೆ ಧನ್ಯವಾದಗಳನ್ನು ತಿಳಿಸಿದರು. ಈ ಪ್ರೀತಿಗೆ ನಾನು ಋಣಿಯಾಗಿದ್ದೇನೆ ಎಂದು ಅಭಿಮಾನದಿಂದಲೇ ಮಾತನಾಡಿದರು. ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ
Advertisement
Advertisement
ಜಗತ್ತಿನಲ್ಲಿ ತುಂಬಾ ಜನ ಸಾಧನೆ ಮಾಡಿದವರು ಇದ್ದಾರೆ. ನಾನೇನೂ ಸಾಧನೆ ಮಾಡಿಲ್ಲ. ಮಾಡಬೇಕಾದ ಕೆಲಸ ತುಂಬಾ ಇದೆ. ನಾನು ಸಾಧನೆ ಮಾಡಿದ್ದೇನೆ ಎಂದು ಅನಿಸಿದ ದಿನ ನಾನೇ ಬಂದು ಮೂರ್ತಿ ಅನಾವರಣ ಮಾಡುತ್ತೇನೆ. ಈ ಮೊದಲೇ ಮೂರ್ತಿಯ ವಿಷಯ ಗೊತ್ತಿದ್ದರೆ ನಾನೇ ಬೇಡ ಎನ್ನುತ್ತಿದ್ದೆ. ಪ್ರೀತಿ ತೋರಿಸಿದ ಎಲ್ಲ ಅಭಿಮಾನಿಗಳಿಗೆ ನಾನು ಋಣಿಯಾಗಿದ್ದೇನೆ ಎಂದರು ಸುದೀಪ್. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ
Advertisement
ಈ ಹಿಂದೆಯೂ ಸುದೀಪ್ ಇಂತಹ ಕೆಲಸಗಳನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ತರುವ ಕೇಕ್, ಹಾರ, ಕಟೌಟ್ ಗಳಿಗೆ ಹಾಲಿನ ಅಭಿಷೇಕ ಮಾಡುವುದನ್ನು ವಿರೋಧಿಸುತ್ತಲೇ ಬಂದಿರುವ ಅವರು, ಆ ಹಣವನ್ನು ನಿರ್ಗತಿಕರಿಗೆ, ಬಡವರಿಗೆ, ಹಸಿದವರಿಗೆ ನೀಡಿ ಎಂದು ಕರೆಕೊಟ್ಟಿದ್ದರು. ಅಭಿಮಾನಿಗಳು ಕೂಡ ಅದನ್ನು ಪಾಲಿಸುತ್ತಾ ಬಂದಿದ್ದಾರೆ.