Connect with us

Cinema

ಈ ವಾರ ಸುದೀಪ್ ಬಿಗ್ ಬಾಸ್ ಶೋ ಹೋಸ್ಟ್ ಮಾಡಲ್ಲ

Published

on

ಬೆಂಗಳೂರು: ಬಿಗ್ ಬಾಸ್ ಅಭಿಮಾನಿಗಳಿಗೆ ಈ ವಾರ ನಿರಾಸೆ ಕಾದಿದೆ. ಸುದೀಪ್ ಅವರು ಈ ವಾರ ಭಾಗವಹಿಸುವುದಿಲ್ಲ ಎಂದು ವಾಹಿನಿ ತಿಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದ ವಾಹಿನಿ, ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಎಂದು ತಿಳಿಸಿದೆ.

ಆರೋಗ್ಯ ಸಮಸ್ಯೆಯಿಂದ 2 ವಾರದ ವೀಕೆಂಡ್ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳದ ಕಿಚ್ಚ ಸುದೀಪ್ ಅವರು ಇದೇ ಶನಿವಾರ ವೀಕ್ಷರ ಎದುರು ಬರಲಿದ್ದಾರೆ ಎಂಬ ಸುದ್ದಿ ಸಿಕ್ಕಿತ್ತು.

ಈ ಸಂಬಂಧ ಟ್ವೀಟ್ ಮಾಡಿ ಸುಳಿವು ನೀಡಿದ್ದ ಅಭಿನಯ ಚಕ್ರವರ್ತಿ, ಆರೋಗ್ಯ ಸುಧಾರಿಸಿದ್ದು, ಈ ವಾರ ಬಿಗ್ ಬಾಸ್ ಎಪಿಸೋಡಿನಲ್ಲಿ ಕಾಣಿಸಿಕೊಳ್ಳಲು ಕಾತುರರಾಗಿದ್ದೇನೆ ಎಂದು ಬರೆದುಕೊಂಡಿದ್ದರು.ಅಲ್ಲದೆ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಹಾಗೂ ಹಾರೈಸಿದ ಎಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಇದೇ ವೇಳೆ ಕಿಚ್ಚ, ವೈದ್ಯ ಡಾ. ವೆಂಕಟೇಶ್ ಹಾಗೂ ಡಾ. ವಿನಯ್ ಅವರಿಗೂ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದರು.

ನನ್ನ ಆರೋಗ್ಯ ಸುಧಾರಣೆಗಾಗಿ ಹಲವಾರು ಮಂದಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಇದರ ವೀಡಿಯೋಗಳು ನನಗೆ ದೊರಕಿವೆ. ಎಲ್ಲರಿಗೂ ಧನ್ಯವಾದ ತಿಳಿಸಿರುವ ಕಿಚ್ಚ ‘ಲವ್ ಯೂ ಆಲ್’ ಇಷ್ಟೇ ಹೇಳಬಲ್ಲೆ  ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದರು.

ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ. ಹೀಗಂತ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇತ್ತು. ಬಳಿಕ ಇದೇ ವಿಚಾರವಾಗಿ ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದರು.

Click to comment

Leave a Reply

Your email address will not be published. Required fields are marked *