ಕಿಚ್ಚ (Kiccha) ಸುದೀಪ್ (Sudeep) ಬಿಜೆಪಿಗೆ (BJP) ಸೇರಲಿದ್ದಾರೆ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಸ್ಟಾರ್ ನಟರಾಗಿ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿರುವ ಸುದೀಪ್ ರಾಜಕೀಯ ಕ್ಷೇತ್ರಕ್ಕೆ ಬಂದು ಮತ್ತಷ್ಟು ಸೇವೆ ಮಾಡಲಿ ಎಂದು ಹಾರೈಸುತ್ತಿದ್ದಾರೆ. ನಟ ಪ್ರಕಾಶ್ ರಾಜ್ (Prakash Raj) ಈ ನಡೆಗೆ ಬಿಜೆಪಿಯನ್ನು ದೂರಿದ್ದಾರೆ. ಮತ್ತು ಈ ಸುದ್ದಿ ಸುಳ್ಳಾಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
Advertisement
ಸುದೀಪ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಕಾಶ್ ರೈ ‘ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಗೆ ಅಸಂಖ್ಯಾತ ಜನರು ಪ್ರತಿಕ್ರಿಯಿಸಿದ್ದಾರೆ.
Advertisement
Advertisement
ನಟ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.
Advertisement
ಈಗಾಗಲೇ ಸುದೀಪ್ ತಾವು ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಪಕ್ಷಗಳಲ್ಲೂ ಅವರ ಆಪ್ತರು ಇರುವುದರಿಂದ ಒಂದು ಪಕ್ಷವನ್ನು ಬೆಂಬಲಿಸುವುದಿಲ್ಲ ಎನ್ನುವ ಮಾತನ್ನು ಪದೇ ಪದೇ ಆಡುತ್ತಾ ಬಂದಿದ್ದಾರೆ. ಆ ಮಾತನ್ನು ಅವರು ಉಳಿಸಿಕೊಳ್ಳುತ್ತಾರೆ ಎನ್ನುವುದು ಆಪ್ತರ ಮಾತು. ಬಿಜೆಪಿ ಪಕ್ಷದಲ್ಲಿ ಸುದೀಪ್ ಅವರ ಹಲವಾರು ಸ್ನೇಹಿತರು ಇದ್ದಾರೆ. ಈ ಕಾರಣಕ್ಕಾಗಿ ಬೆಂಬಲಿಸಬಹುದು ಎನ್ನುವುದು ಆಪ್ತರ ಅನಿಸಿಕೆ.