ಖಾಸಗಿ ವಿಡಿಯೋ ಹರಿಬಿಡುವುದಾಗಿ ಕಿಚ್ಚ ಸುದೀಪ್ ಗೆ (Sudeep) ಎರಡು ಬೆದರಿಕೆ ಪತ್ರ (Threat letter) ಬರೆದವರ ಪತ್ತೆಗೆ ಬಲೆ ಬೀಸಿರುವ ಸಿಸಿಬಿ (CCB) ಹಲವರನ್ನು ಕರೆದು ವಿಚಾರಣೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಜಾಕ್ ಮಂಜು ಮತ್ತು ಸುದೀಪ್ ಅವರಿಂದಲೂ ಹೇಳಿಕೆ ಪಡೆದುಕೊಳ್ಳಲಿದೆಯಂತೆ. ಈಗಾಗಲೇ ಬೆದರಿಕೆ ಹಾಕಿದವರ ಸುಳಿವು ಕೂಡ ಸಿಸಿಬಿಗೆ ಸಿಕ್ಕಿದ್ದು, ಅಧಿಕಾರಿಗಳು ಅವರ ಬೆನ್ನು ಹತ್ತಿದ್ದಾರಂತೆ.
Advertisement
ತಮ್ಮ ಮನೆಯ ವಿಳಾಸಕ್ಕೆ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿ ಪತ್ರ ಬರೆದವರು ಬೇರೆ ಯಾರೂ ಅಲ್ಲ, ಅವರು ಸಿನಿಮಾ ರಂಗದವರೇ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ತಿಳಿಸಿದ್ದಾರೆ. ಅಲ್ಲದೇ, ಅವರು ಯಾರು ಅಂತಾನೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ಪಾಠ ಕಲಿಸಲಾಗುವುದು ಎಂದು ಸುದೀಪ್ ತಿಳಿಸಿದ್ದಾರೆ. ಯಾವುದರ ಮೂಲಕ ಅವರಿಗೆ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ. ಹಾಗೆಯೇ ಕೊಡುತ್ತೇನೆ ಎಂದು ಮಾಧ್ಯಮಗಳೊಂದಿಗೆ ಸುದೀಪ್ ಮಾತನಾಡಿದರು.
Advertisement
Advertisement
ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಮಾರ್ಚ್ 29 ರಂದೇ ಆ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದರು.
Advertisement
ಜಾಕ್ ಮಂಜು (Jack Manju) ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.