Bengaluru CityCinemaLatestMain PostSandalwood

ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿಯವರಿಗೆ ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸಂತೋಷವನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ.

ನಿಮ್ಮೆಲ್ಲರೊಂದಿಗೆ ಸಂತೋಷದ ಸುದ್ದಿಯನ್ನು ಹಂಚಿಕೊಳ್ಳಲು ಬಯಸುತ್ತೇನೆ. ಇಂಡಿಯನ್ ಎಂಪೈರ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್‍ನಿಂದ ನನಗೆ ಕಲಾ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿದೆ ಎಂದು ಬರೆದುಕೊಂಡು ಡಾಕ್ಟರೇಟ್ ಸ್ವೀಕರಿಸುತ್ತಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

 

View this post on Instagram

 

A post shared by Sudharani (@sudharanigovardhan)

ಸ್ಯಾಂಡಲ್‍ವುಡ್‍ನ ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಅವರು ಬಾಲ್ಯ ನಟಿಯಾಗಿ ನಟನೆಯನ್ನು ಪ್ರಾರಂಭಿಸಿದ್ದರು. ಹಲವಾರು ಜಾಹಿರಾತುಗಳಲ್ಲಿ ಸುಧಾರಾಣಿ ಕಾಣಿಸಿಕೊಂಡಿದ್ದರು. 12ನೇ ವಯಸ್ಸಿನಲ್ಲಿ ಶಿವರಾಜ್‍ಕುಮಾರ್ ಅವರ ಮೊದಲ ಸಿನಿಮಾ ಆನಂದ್‍ಗೆ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಎಂಟ್ರಿ ಕೊಟ್ಟರು. ಇವರು ನಟಿಸಿದ ಸಿನಿಮಾಗಳೆಲ್ಲವು ಸೂಪರ್ ಹಿಟ್ ಆಗುತ್ತಿದ್ದವು. ಇವರು ಚಿತ್ರರಂಗಕ್ಕೆ ಕಾಲಿಟ್ಟು 35 ವರ್ಷ ಕಳೆದಿದ್ದರೂ, ಇಂದಿಗೂ ಸಹ ಅಷ್ಟೇ ಬೇಡಿಕೆ ಉಳಿಸಿಕೊಂಡಿದ್ದಾರೆ. #MeToo ಪ್ರಕರಣ – ಧರ್ಮೋ ರಕ್ಷತಿ ರಕ್ಷಿತಃ ಎಂದ ಧ್ರುವ, ಜಂಟಲ್ ಮ್ಯಾನ್ ಅಂದ ಮೇಘನಾ

ಕನ್ನಡ ಸಿನಿಪ್ರಿಯರ ನೆಚ್ಚಿನ ನಟಿ ಸುಧಾರಾಣಿ, ಸೋಷಿಯಲ್ ಮೀಡಿಯಾದಲ್ಲಿ ಈಗ ಸಖತ್ ಆಕ್ಟಿವ್ ಆಗಿದ್ದಾರೆ. ಅವರು ಅಭಿಮಾನಿಗಳಿಗೋಸ್ಕರ ಹಲವಾರು ಫೋಟೋ ಮತ್ತು ವೀಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ. ಇದೀಗ ಅವರಿಗೆ ಗೌರವ ಡಾಕ್ಟರೇಟ್ ಬಂದಿರುವ ಕುರಿತಾಗಿ ಸಂತಸವನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಕಾಮೆಂಟ್ ಮಾಡುತ್ತಿದ್ದಾರೆ.

Leave a Reply

Your email address will not be published.

Back to top button