– ಧರ್ಮೇಂದ್ರ ಪ್ರಧಾನ್ ಅವರ ತಪ್ಪಿಲ್ಲ; ಸಚಿವರ ಪರ ಸುಧಾಕರ್ ಬ್ಯಾಟಿಂಗ್
ಚಿಕ್ಕಬಳ್ಳಾಪುರ: NEET ಪರೀಕ್ಷೆ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ರಾಜಕೀಯ ಮಾಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ (Dr K Sudhakar) ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಮಾತನಾಡಿದ ಸಂಸದ ಡಾ. ಕೆ. ಸುಧಾಕರ್, ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ರಾಜಕೀಯಕ್ಕೆ ಕಾಂಗ್ರೆಸ್ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ವಿದೇಶದಿಂದ ಬಂದ ಬಳಿಕವೂ ವಿದ್ಯಾರ್ಥಿಗಳ ಹೋರಾಟ ಅಥವಾ ಸೋನಂ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿಲ್ಲ. ಕರ್ನಾಟಕದ KPSC ಸಮಸ್ಯೆಗಳ ಬಗ್ಗೆಯೂ ಅವರಿಗೆ ಅರಿವಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ಆಡಳಿತದ ಹಲವು ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಆ ವೇಳೆ ಕಾಂಗ್ರೆಸ್ ಯಾವ ಕ್ರಮ ಕೈಗೊಂಡಿತ್ತು ಎಂದು ಪ್ರಶ್ನಿಸಿದ ಅವರು, ಪೇಪರ್ ಲೀಕ್ ಅಕ್ಷಮ್ಯ ಅಪರಾಧ ಎಂದರು.
ಪೇಪರ್ ಲೀಕ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ 10 ವರ್ಷ ಜೈಲು ಶಿಕ್ಷೆ ಹಾಗೂ 10 ಕೋಟಿ ರೂ. ದಂಡದಂತಹ ಕಠಿಣ ಕಾನೂನು ಜಾರಿಗೆ ತಂದಿದೆ. ಇಂತಹ ನಿರ್ಧಾರ ಕೈಗೊಳ್ಳುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಡಾ. ಕೆ. ಸುಧಾಕರ್ ಹೇಳಿದರು.
ಧರ್ಮೇಂದ್ರ ಪ್ರಧಾನ್ ತಪ್ಪಿಲ್ಲ..
NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಯಾವುದೇ ತಪ್ಪಿಲ್ಲ. ಪರೀಕ್ಷೆ ನಡೆಸುವ ಪ್ರಾಧಿಕಾರ ಹಾಗೂ ಅಲ್ಲಿನ ಅಧಿಕಾರಿಗಳದ್ದೇ ತಪ್ಪು ಎಂದು ಸಂಸದ ಡಾ. ಕೆ. ಸುಧಾಕರ್ ಹೇಳಿದರು. ವಿದ್ಯಾರ್ಥಿಗಳ ಪ್ರತಿಭಟನೆಯ ಒತ್ತಡದಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಹೊರತು, ಅವರ ವೈಯಕ್ತಿಕ ತಪ್ಪಿಲ್ಲ ಎಂದು ಹೇಳಿದರು.ಇದನ್ನೂ ಓದಿ: ಕೊಡಗಿನಲ್ಲಿ ಕೋವಿಡ್ ಎಚ್ಚರಿಕೆ: ಜಿಲ್ಲಾ ಆಸ್ಪತ್ರೆಯಲ್ಲಿ 40 ಹಾಸಿಗೆ ಮೀಸಲು
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಧರ್ಮೇಂದ್ರ ಪ್ರಧಾನ್ ಅವರ ಯಾವುದೇ ತಪ್ಪಿಲ್ಲ. ಪರೀಕ್ಷೆ ನಡೆಸುವ ಪ್ರಾಧಿಕಾರ ಮತ್ತು ಸಂಬಂಧಿತ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಅವರು ಸ್ಪಷ್ಟಪಡಿಸಿದರು.
ತಪ್ಪಿತಸ್ಥರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದ್ದು, 57 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಸುಧಾಕರ್ ಸಮರ್ಥಿಸಿಕೊಂಡರು.ಇದನ್ನೂ ಓದಿ: ಹಾರಿ ಹೋಯ್ತು ಮಗುವಿನ ತೊಟ್ಟಿಲು; ಚೀನಾದಲ್ಲಿ ಭೀಕರ ಚಂಡಮಾರುತಕ್ಕೆ 10 ಬಲಿ
