Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಗಾದಿ ಉಡುಗೊರೆಯಾಗಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಯುಗಾದಿ ಉಡುಗೊರೆಯಾಗಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ: ಸುಧಾಕರ್

Chikkaballapur

ಯುಗಾದಿ ಉಡುಗೊರೆಯಾಗಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ: ಸುಧಾಕರ್

Public TV
Last updated: March 21, 2023 4:30 pm
Public TV
Share
2 Min Read
Chikkaballapur bmtc sudhakar
SHARE

ಚಿಕ್ಕಬಳ್ಳಾಪುರ: ನಗರದ ಜನತೆಗೆ ಯುಗಾದಿ ಹಬ್ಬದ ಉಡುಗೊರೆಯಾಗಿ ಬಿಎಂಟಿಸಿ ಬಸ್ ಸೇವೆ ಕಾರ್ಯಾರಂಭ ಮಾಡುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Sudhakar) ಅಬಿಪ್ರಾಯಪಟ್ಟರು.

ನಗರದಲ್ಲಿ ಮಂಗಳವಾರ ಬಿಎಂಟಿಸಿ (BMTC) ಹವಾನಿಯಂತ್ರಿತ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಗೆ ಬಿಎಂಟಿಸಿ ಸೇವೆ ತರಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಹಿಂದೆ ತಮ್ಮನ್ನು ಹಲವರು ಹೈಟೆಕ್ ಶಾಸಕರು ಎಂದು ಕರೆಯುತ್ತಿದ್ದರು. ಇದೀಗ ಜಿಲ್ಲೆಯಾದ್ಯಂತ ಎಲ್ಲಾ ಅಭಿವೃದ್ಧಿ ಹೈಟೆಕ್ ಮಾಡುವ ಗುರಿ ಹೊಂದಿರುವುದಾಗಿ ಹೇಳಿದರು.

Chikkaballapur bmtc 1

ಹವಾನಿಯಂತ್ರಿತ ಬಿಎಂಟಿಸಿ ಬಸ್‌ಗಳು ಪ್ರತಿನಿತ್ಯ ಬೆಂಗಳೂರಿಗೆ ನೇರವಾಗಿ ಸೇವೆ ಒದಗಿಸಲಿವೆ. ವಿದ್ಯಾರ್ಥಿಗಳು, ರೈತರು, ಉದ್ಯೋಗಿಗಳಿಗೆ ಇದು ಸಹಕಾರಿಯಾಗಲಿದೆ. ಈ ಸೇವೆ ಜಿಲ್ಲೆಗೆ ವಿಸ್ತರಿಸಲು ತಾಂತ್ರಿಕ ಸಮಸ್ಯೆ ಬರಲಿದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಸೇವೆ ಆರಂಭಿಸಲು ಕೆಎಸ್ಆರ್‌ಟಿಸಿ (KSRTC) ಅವರ ಒಪ್ಪಿಗೆ ಬೇಕಿತ್ತು. ಅವರು ಪರವಾನಗಿ ನೀಡುವುದು ತಡವಾದ ಕಾರಣ ಮುಖ್ಯಮಂತ್ರಿಗಳಿಂದ ಎರಡು ಬಾರಿ ಸೂಚನೆ ಕೊಡಿಸಿ ಬಸ್ ಸೇವೆ ಆರಂಭಿಸಲಾಗಿದೆ ಎಂದರು‌.

ಬದ್ಧತೆ ಇದ್ದರೆ ಮಾತ್ರ ಇಂತಹ ಕೆಲಸ ಮಾಡಲು ಸಾಧ್ಯ, ಇಂತಹ ಬದ್ಧತೆ ಬಿಎಂಟಿಸಿ ಉಪಾಧ್ಯಕ್ಷ ನವೀನ್ ಕಿರಣ್ ಅವರು ತೋರಿಸಿರುವುದು ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ. ಅದೇ ರೀತಿಯಲ್ಲಿ ಖಾದಿ ಮಂಡಳಿಯಲ್ಲಿಯೂ ಅಧ್ಯಕ್ಷ ಕೆ.ವಿ. ನಾಗರಾಜ್ ಅವರು ಹೆಚ್ಚಿನ ಶ್ರಮ ಪಡುತ್ತಿದ್ದಾರೆ. ನಿರೀಕ್ಷೆಗೂ ಮೀರಿ ಮಂಡಳಿಯಲ್ಲಿ ವಹಿವಾಟು ನಡೆದಿದೆ. ಆದರೆ ಯುವಕರು ಖಾದಿ ಮಂಡಳಿ ಉಪಯೋಗ ಹೆಚ್ಚು ಪಡೆಯುತ್ತಿಲ್ಲ. ಎಷ್ಟೇ ಅರಿವು ಮೂಡಿಸಿದರೂ ಅದು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Chikkaballapur bmtc 2

ಬಿಎಂಟಿಸಿ ಸಂಸ್ಥೆಗೆ ನಷ್ಟವಾಗದಂತೆ ಯಶಸ್ವಿ ಮಾಡಲು ಜನರು ಈ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಂಚಾರಿ ಸೇವೆಗಳನ್ನು ಬಳಸುವುದು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸಾರಿಗೆ ಸೇವೆ ವಿಶ್ವದಲ್ಲಿ ಅತ್ಯಂತ ಶ್ರೀಮಂತರೂ ಬಳಸುತ್ತಾರೆ. ಸಚಿವರು, ಪ್ರಧಾನಿಗಳೂ ಈ ಸೇವೆ ಬಳಕೆ ಮಾಡುತ್ತಾರೆ. ಇಂತಹ ಮನೋಭಾವ ನಮ್ಮಲ್ಲಿಯೂ ಬರಬೇಕು. ಇದನ್ನು ಹೆಚ್ಚು ಬಳಸುವುದರಿಂದ ಸಂಚಾರ ದಟ್ಟಣೆಗೆ ನಿಯಂತ್ರಣ ಮಾಡಲು ಸಾಧ್ಯ ಎಂದು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿಯೂ ಇತ್ತೀಚಿನ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಪ್ರತಿದಿನ 5 ಸಾವಿರ ವಾಹನಗಳು ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುತ್ತಿವೆ. ಆದರೆ ರಸ್ತೆ ಹೆಚ್ಚಾಗುವುದಿಲ್ಲ, ಇದರಿಂದ ವಾಹನ ದಟ್ಟಣೆ ಹೆಚ್ಚಿ ಸಮಸ್ಯೆ ಎದುರಾಗುತ್ತಿದ್ದು, ನಾನೂ ಸೇರಿದಂತೆ ಎಲ್ಲರೂ ಈ ಬಗ್ಗೆ ಚಿಂತಿಸಬೇಕಾದ ಅಗತ್ಯವಿದೆ ಎಂದರು.

Chikkaballapur bmtc

ಸಂಚಾರ ನಿಯಮ ತಪ್ಪದೇ ಪಾಲಿಸಬೇಕು, ಹದಿಹರಿಯದವರು ವಾಹನ ಚಲಾಯಿಸಬಾರದು, ರೋಗಗಳಿಗಿಂತ ಹೆಚ್ಚು ಅಪಘಾತಗಳಲ್ಲಿಯೇ ಸಾವು ಆಗುತ್ತಿದೆ. ಅದರಲ್ಲಿಯೂ ಯುವಕರೇ ಹೆಚ್ಚು ಸಾಯುತ್ತಿರುವುದು ದುರಂತ. ಎಲ್ಲರೂ ನಿಯಮಗಳನ್ನು ತಪ್ಪದೇ ಪಾಲಿಸುವ ಮೂಲಕ ಅನಾಹುತಗಳು ತಪ್ಪಿಸುವ ಜೊತೆಗೆ ವಾಹನ ದಟ್ಟಣೆ ಕಡಿಮೆ ಮಾಡಲು ಸಾಧ್ಯವಾಗಲಿದೆ. ಸಾರಿಗೆ ನೌಕರರಿಗೆ ಸರ್ಕಾರ ಶೇ.15ರಷ್ಟು ವೇತನ ಹೆಚ್ಚಳ ಮಾಡಿದೆ ಎಂದರು. ಇದನ್ನೂ ಓದಿ: ಚನ್ನಪಟ್ಟಣ ಬಿಟ್ಟು ಬೇರೆ ಕಡೆ ಸ್ಪರ್ಧಿಸಲ್ಲ: ಹೆಚ್‍ಡಿಕೆ

ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ವೇತನ ಆಯೋಗ ನೀಡುವ ವರದಿ ಆಧಾರದಂತೆ ಹೆಚ್ಚಿನಸಲಾಗುತ್ತಿತ್ತು. ಆದರೆ ಈ ಬಾರಿ 7ನೇ ವೇತನ ಆಯೋಗ ರಚನೆ ಮಾಡಿ, ಮಧ್ಯಂತರ ವರದಿ ಬರುವುದಕ್ಕೂ ಮುನ್ನವೇ ಸರ್ಕಾರಿ ನೌಕರರಿಗೆ ಶೇ.17 ವೇತನ ಹೆಚ್ಚಳ ಮಾಡಲಾಗಿದೆ ಎಂದರು. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

TAGGED:BMTCbuschikkaballapurK Sudhakarksrtcಕೆಎಸ್‍ಆರ್‍ಟಿಸಿಚಿಕ್ಕಬಳ್ಳಾಪುರಬಸ್ಬಿಎಂಟಿಸಿಸುಧಾಕರ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Saifullah Kasuri
Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
By Public TV
5 minutes ago
Priyank Kharge 2
Districts

JDS ಪಾರ್ಟಿಯನ್ನೇ ಮಾರಾಟಕ್ಕಿಟ್ಟಿದ್ದಾರೆ – ಪ್ರಿಯಾಂಕ್‌ ಖರ್ಗೆ ಲೇವಡಿ

Public TV
By Public TV
10 minutes ago
gadag
Districts

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Public TV
By Public TV
27 minutes ago
Assistant Professor Annapoorna
Dharwad

ಅಂಡಮಾನ್‌ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಪ್ರೊಫೆಸರ್ ಹೃದಯಾಘಾತಕ್ಕೆ ಬಲಿ

Public TV
By Public TV
46 minutes ago
Wilson Garden
Bengaluru City

ಗಂಡನ ಸೈಕೋ ವರ್ತನೆ ವಿರುದ್ಧ ದೂರು – ನಗ್ನ ಫೋಟೋ ತೆಗೆದು ಬ್ಲ್ಯಾಕ್‌ಮೇಲ್‌ ಅಂತ ಪತಿ ಪ್ರತಿದೂರು!

Public TV
By Public TV
58 minutes ago
Chandrashekar Death
Crime

ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?