ಚಿಕ್ಕಬಳ್ಳಾಪುರ: ಇಬ್ಬರೂ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿ, ಯಾರಿಗೆ ಎಷ್ಟು ವೋಟ್ ಬರುತ್ತೆ ನೋಡೋಣ ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ (Pradeep Eshwar) ಮಾಜಿ ಸಚಿವ ಸುಧಾಕರ್ (K.Sudhakar) ಸವಾಲು ಹಾಕಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ (Chikkaballapur) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಬಿಟ್ಟು ಸ್ವತಂತ್ರವಾಗಿ ಸ್ಪರ್ಧೆ ಮಾಡುವಂತೆ ಶಾಸಕರಿಗೆ ಸವಾಲು ಹಾಕಿದ್ದಾರೆ. ಅಲ್ಲದೇ ನಾನು ಸಹ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತೇನೆ. ನಿಮಗೆ ಎಷ್ಟು ವೋಟು ಬರುತ್ತದೆ. ನನಗೆ ಎಷ್ಟು ವೋಟು ಬರುತ್ತದೆ ನೋಡೋಣ. ಒಂದು ವರ್ಷದಲ್ಲಿ ರಾಜೀನಾಮೆ ಕೊಟ್ಟು ಬಿಜೆಪಿ (BJP) ಇಲ್ಲದ ಕಡೆ ಗೆದ್ದು ನನ್ನ ಶಕ್ತಿ ತೋರಿಸಿದ್ದೇನೆ. ಇದೇ ರೀತಿ ಗೆದ್ದು ತೋರಿಸುವಂತೆ ಸವಾಲು ಹಾಕಿದ್ದಾರೆ. ಈಶ್ವರ್ ಮುಖ ನೋಡಿದರೆ 5,000 ವೋಟು ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಗ್ರಾಪಂ ಅಧ್ಯಕ್ಷ ಸ್ಥಾನ ವಿಚಾರವಾಗಿ ಗಲಾಟೆ – ನಡುರಸ್ತೆಯಲ್ಲೇ ಬಡಿದಾಡಿಕೊಂಡ ಸದಸ್ಯರು; ಓರ್ವ ಅಸ್ವಸ್ಥ
Advertisement
Advertisement
ಶಾಸಕರ ಬೆಂಬಲಿಗರು ಹಲ್ಲೆ ಯತ್ನ ನಡೆಸಿ ಪ್ರಾಣ ಬೆದರಿಕೆ ಹಾಕಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಎಸ್‍ಪಿ ಕಚೇರಿ ಬಳಿ ಸುಧಾಕರ್ ನೇತೃತ್ವದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಬೆಂಬಲಿಗರು ಧಿಕ್ಕಾರ ಕೂಗಿದ್ದಾರೆ. ಬಳಿಕ ಎಸ್‍ಪಿ ಡಿ.ಎಲ್ ನಾಗೇಶ್ ಅವರಿಗೆ ದೂರು ನೀಡಿದ್ದಾರೆ.
Advertisement
Advertisement
ಸುಧಾಕರ್ ಅವರ ಬೆಂಬಲಿಗ ಸಂತೋಷ್ ರಾಜು, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಶಾಸಕರ ಬೆಂಬಲಿಗರು ಸಂತೋಷ್ ರಾಜು ಅಂಗಡಿ ಬಳಿ ತೆರಳಿ ಪ್ರಶ್ನೆ ಮಾಡಲು ಮುಂದಾಗಿದ್ದರು. ಇದೇ ವಿಚಾರವಾಗಿ ಹಲ್ಲೆ ಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ. ಅಲ್ಲದೇ ಶಾಸಕ ಹಾಗೂ ಬೆಂಬಲಿಗರಾದ ಗಂಗರಾಜು, ಡ್ಯಾನ್ಸ್ ಶ್ರೀನಿವಾಸ್, ವಿನಯ್ ಬಂಗಾರಿ, ಮಂಚನಬಲೆ ದೇವರಾಜು, ಲಕ್ಷ್ಮಯ್ಯ, ಶ್ರೀನಿವಾಸ್ ವಿರುದ್ಧ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಸುಧಾಕರ್ ಅವರು ಪ್ರದೀಪ್ ಈಶ್ವರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಂಡಮಾನ್ – ನಿಕೋಬಾರ್ ದ್ವೀಪಗಳಲ್ಲಿ 5.9 ತೀವ್ರತೆ ಭೂಕಂಪನ
Web Stories