ಹಾವೇರಿ: ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಯ (Sugarcane Mill) ಮಾಲೀಕರು ಶಾಸಕರು, ಮಾಜಿ ಸಚಿವರು, ಸಚಿವರಾಗಿರುವ ಕಾರಣ ಅವರ ಲಾಬಿ ಮಣಿದು ಸರ್ಕಾರ (Karnataka Government) ದರ ನಿಗದಿ ಮಾಡಲು ಹಿಂದೇಟು ಹಾಕುತ್ತಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrashekar) ಕಿಡಿಕಾರಿದ್ದಾರೆ.
ಇಂದು ಹಾವೇರಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ರ್ಯಾಲಿ ಮಾಡಲಾಯಿತು. ಹಾವೇರಿ ಮುರುಘರಾಜೇಂದ್ರ ಮಠದಿಂದ ಪ್ರತಿಭಟನೆ ಆರಂಭಿಸಿ, ಜಿಲ್ಲಾಧಿಕಾರಿ ಕಚೇರಿ ವರೆಗೆ ಟ್ಯಾಕ್ಟರ್ ರ್ಯಾಲಿ ನಡೆಸಲಾಯಿತು. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ – ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ
ಈ ವೇಳೆ ಮಾತಮಾಡಿದ ಅವರು, ಪ್ರತಿ ಟನ್ ಕಬ್ಬಿಗೆ 3,500 ರೂ. ದರವನ್ನ ನೀಡಬೇಕು. ಮಹಾರಾಷ್ಟ್ರದಲ್ಲಿ (Maharashtra) ಇದೆ ಕಬ್ಬು ಬೆಳೆಯುತ್ತಿದ್ದಾರೆ. ಅಲ್ಲಿ ರೈತರು (Farmers) ಭೂಮಿ ಒಂದೇ, ನೀರು ಒಂದೇ , ಹಾಗಾದರೆ ಬೆಲೆ ಮಾತ್ರ ವ್ಯತ್ಯಾಸ ಮಾಡುತ್ತಿದ್ದಾರೆ ಎಂದು ಸಿಟ್ಟು ಹೊರಹಾಕಿದರು. ಇದನ್ನೂ ಓದಿ: ಹತ್ತರಗಿ ಟೋಲ್ ಬಳಿ ಕಲ್ಲು ತೂರಾಟ ನಡೆಸಿದವರು ರೈತರಲ್ಲ: ಶಶಿಕಾಂತ ಗುರೂಜಿ

