ಹುಬ್ಬಳ್ಳಿ: ರೈತರ ಕಬ್ಬಿನ ಬಿಲ್ ಪಾವತಿ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಮೂರು ದಿನಗಳ ಗಡುವು ನೀಡಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಖಾತೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಖಡಕ್ ವಾರ್ನಿಂಗ್ ನೀಡಿದ್ದಾರೆ.
Advertisement
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರು ಭಯ ಪಡುವ ಅವಶ್ಯಕತೆ ಇಲ್ಲ. ಈಗಾಗಲೇ ರಾಜ್ಯದ ಸಕ್ಕರೆ ಕಾರ್ಖಾನೆಗಳೊಂದಿಗೆ ಮೀಟಿಂಗ್ ಮಾಡಲಾಗಿದೆ. ಅವರಿಗೆ ಕಬ್ಬಿನ ಬಾಕಿ ಬಿಲ್ ನೀಡುವಂತೆ ಮೂರು ದಿನಗಳ ಕಾಲಾವಕಾಶ ನೀಡಲಾಗಿದೆ. ಏಳು ಸಕ್ಕರೆ ಕಾರ್ಖಾನೆಗಳು ಬಿಲ್ ಬಾಕಿ ಉಳಿಸಿಕೊಂಡಿವೆ. ಅದನ್ನು ಮೂರು ದಿನದಲ್ಲೇ ಪಾವತಿ ಮಾಡಲು ಹೇಳಿದ್ದೇನೆ ಎಂದರು. ಇದನ್ನೂ ಓದಿ: ರೈತರಿಗೆ ದಾಖಲೆ ನೀಡಲು ಸತಾಯಿಸುತ್ತಿದ್ದ ಅಧಿಕಾರಿಗಳಿಗೆ ತರಾಟೆ- ಸೂ….ಮಕ್ಕಳು ಎಂದ ರಮೇಶ್ ಕುಮಾರ್
Advertisement
Advertisement
ರಾಜ್ಯ ಸರ್ಕಾರ ರೈತರ ಪರವಾಗಿ ಇದೆ. ರೈತರ ಏಳಿಗೆ ನಮಗೆ ಶ್ರೀರಕ್ಷೆ ಆಗಿದೆ. ಅದಕ್ಕಾಗಿ ರೈತರು ಆತಂಕಕ್ಕೆ ಒಳಗಾಗಬಾರದು. ಪಕ್ಷಪಾತ ಮಾಡದೇ ಅಂಕಿ ಸಂಖ್ಯೆಯ ದಾಖಲೆ ನೀಡಿದ್ದೇನೆ. ಯಾರೇ ಸಕ್ಕರೆ ಬಿಲ್ ಉಳಿಸಿಕೊಂಡಿದ್ದರು ತಕ್ಷಣವೇ ಪಾವತಿಗೆ ಸೂಚನೆ ನೀಡಿದ್ದೇನೆ ಎಂದು ನುಡಿದರು. ಇದನ್ನೂ ಓದಿ: ಹಾನಗಲ್, ಸಿಂದಗಿ ಉಪ ಚುನಾವಣೆಗೆ ನಾಳೆ ಅಭ್ಯರ್ಥಿಗಳ ಆಯ್ಕೆ: ಈಶ್ವರಪ್ಪ
Advertisement