ಸಾಂದರ್ಭಿಕ ಚಿತ್ರ
ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟಾವಿಗೆ ಬಂದಿದ್ದ ಸುಮಾರು 10 ಕ್ಕೂ ಹೆಚ್ಚು ಎಕರೆ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರಟೇಕ ಗ್ರಾಮದಲ್ಲಿ ನಡೆದಿದೆ.
ಇಂದು ಮಧ್ಯಾಹ್ನದ ವೇಳೆ ಚಂದೂರಟೇಕ ಗ್ರಾಮದ ಕಬ್ಬಿನ ಗದ್ದೆಯಲ್ಲಿದ್ದ ಟ್ರಾನ್ಸ್‌ಫಾರ್ಮರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಬಳಿಕ ಸುತ್ತಲಿದ್ದ ಗ್ರಾಮದ ಸುಕುಮಾರ ಚೌಗಲೆ, ಮಹಾವೀರ ಚೌಗಲೆ, ಧನಂಜಯ ಚೌಗಲೆ,ಬಾಳಾಸಾಬ ಚೌಗಲೆ, ರಾಜು ಚೌಗಲೆ, ಸಾಗರ ಚೌಗಲೆ ಸೇರಿದಂತೆ 7 ಕ್ಕಿಂತ ಹೆಚ್ಚು ರೈತರ 10 ಎಕರೆಗೂ ಅಧಿಕ ಕಬ್ಬು ಸುಟ್ಟು ಕರಕಲಾಗಿದೆ.
- Advertisement
- Advertisement
ಬೆಂಕಿಯನ್ನು ಕಂಡು ರೈತರು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ. ನೋಡು ನೋಡುತ್ತಲೇ ಬೆಳೆದು ನಿಂತಿದ್ದ ಕಬ್ಬು ಧಗಧಗನೆ ಉರಿದು ಸುಟ್ಟು ಕರಕಲಾಗಿವೆ. ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇತ್ತೀಚೆಗೆ ಇದೇ ಗ್ರಾಮದಲ್ಲಿ 60 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿತ್ತು. ಘಟನೆ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv