ಚಿಕ್ಕೋಡಿ: ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದ ಪರಿಣಾಮ 50 ಎಕರೆಗೂ ಹೆಚ್ಚು ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ.
Advertisement
ಒಟ್ಟು 15ಕ್ಕೂ ಹೆಚ್ಚು ರೈತರ ಜಮೀನುಗಳ ಕಬ್ಬಿನ ಬಳೆಗೆ ಬೆಂಕಿ ಬಿದ್ದಿದ್ದು, ಬೆಂಕಿ ನಂದಿಸಲು ಸ್ಥಳೀಯರು ಹಾಗೂ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಹರಸಾಹಸಪಟ್ಟರು. ಯಾವುದೇ ಪ್ರಯೋಜನೆ ಆಗದೇ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ. ಇದನ್ನೂ ಓದಿ: ಡೆಂಘೀ ಜ್ವರಕ್ಕೆ ಐದು ವರ್ಷದ ಕಂದಮ್ಮ ಬಲಿ
Advertisement
Advertisement
ಕಬ್ಬು ಬೆಳೆ ನಾಶದಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತರು ಕಂಗಾಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಬೆಳೆ ಹಾನಿಯಿಂದ 15ಕ್ಕೂ ಹೆಚ್ಚು ರೈತರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.