– 1000 ರೂ. ಪ್ರೋತ್ಸಾಹ ಧನಕ್ಕೆ ಆಗ್ರಹ
ಬೆಳಗಾವಿ: ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಭೇಟಿ ದಿನವೇ ಕಬ್ಬು ಬೆಳೆಗಾರರು (Sugarcane Farmers) ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಅಹೋರಾತ್ರಿ ಧರಣಿ (Protest) ಆರಂಭಿಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 1000 ರೂ. ಪ್ರೋತ್ಸಾಹ ಧನ ಘೋಷಿಸಬೇಕು. ತೂಕ ಯಂತ್ರ ಖರೀದಿಗೆ 500 ಕೋಟಿ ರೂ. ಮೀಸಲಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಆರಂಭಿಸಿದ್ದಾರೆ. ಬೇಡಿಕೆ ಈಡೇರುವ ತನಕ ಹೋರಾಟ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಟನ್ ಕಬ್ಬಿಗೆ 1 ಸಾವಿರ ರೂ. ಪ್ರೋತ್ಸಾಹಧನ ಘೋಷಿಸಿ – ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ರೈತರು
ಇಂದು (ಅ.26) ಸಿಎಂ ಡಿಕೆಶಿ, ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಭೆ ನಡೆಯಲಿದೆ. ಈ ವೇಳೆ , ಸರ್ಕಾರ ಹಾಗೂ ಸಿಎಂ ಗಮನ ಸೆಳೆಯಲು ರೈತರ ಹೋರಾಟಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಕಬ್ಬು ಬೆಳೆಗಾರರ ಆಕ್ರೋಶ – ರಾಷ್ಟ್ರೀಯ ಹೆದ್ದಾರಿ ತಡೆದು ಅಹೋರಾತ್ರಿ ಧರಣಿ, ವಾಹನ ಸವಾರರ ಪರದಾಟ
ರೈತರ ಪ್ರಮುಖ ಬೇಡಿಕೆಗಳು ಏನು?
– ಪ್ರತಿ ಟನ್ ಕಬ್ಬಿಗೆ ಕನಿಷ್ಠ 5,500 ರೂ. ದರ ನಿಗದಿಪಡಿಸಬೇಕು.
– ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (MSP) ಹೆಚ್ಚಿಸಬೇಕು.
– ರಾಜ್ಯದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಎಥೆನಾಲ್ ಅನ್ನು ಸರ್ಕಾರವೇ ಖರೀದಿಸಬೇಕು.
– ಡಾ. ಸ್ವಾಮಿನಾಥನ್ ಆಯೋಗದ ವರದಿ ಹಾಗೂ ಶಿಫಾರಸುಗಳನ್ನು ತಕ್ಷಣವೇ ಜಾರಿಗೊಳಿಸಬೇಕು.
