ಮಂಡ್ಯ: ಸಕ್ಕರೆ ನಾಡು ಮಂಡ್ಯ ಮೈಶುಗರ್ ಕಾರ್ಖಾನೆ ಸದ್ಯ ಸ್ಥಗಿತಗೊಂಡಿದ್ದು, ಸರ್ಕಾರ ಮಾತ್ರ ಮತ್ತೆ ಕಾರ್ಖಾನೆ ಆರಂಭಿಸಲು ಮೀನಾಮೇಷ ಎಣಿಸುತ್ತಿದ್ದೆ. ಇದೀಗ ಮಂಡ್ಯದ ಕಬ್ಬು ಸಂಶೋಧನಾ ಕೇಂದ್ರ ಹಾಗೂ ಬೆಂಗಳೂರಿನ ಆಯುಕ್ತರ ಕಚೇರಿಯನ್ನು ಬೇರೆಡೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
Advertisement
ಮಂಡ್ಯ ರೈತರ ಜೀವನಾಡಿಯಾಗಿರುವ ಮೈಶುಗರ್ ಕಾರ್ಖಾನೆ ಸ್ಥಬ್ಧಗೊಂಡು ಹಲವು ವರ್ಷಗಳೇ ಕಳೆದಿದೆ. ಮತ್ತೆ ಕಾರ್ಖಾನೆ ಪುನರಾರಂಭಿಸುವಂತೆ ರೈತರು, ಜಿಲ್ಲೆಯ ಜನರು ಹೋರಾಟವನ್ನು ಮಾಡ್ತಾನೆ ಇದ್ದಾರೆ. ಆದರು ರಾಜ್ಯ ಸರ್ಕಾರ ಮಾತ್ರ ಕಾರ್ಖಾನೆ ಆರಂಭಿಸುವ ಬಗ್ಗೆ ಚಿಂತನೆ ನಡೆಸದೆ ಮೀನಾಮೇಷ ಎಣಿಸುತ್ತಿದೆ. ಈ ಹೊತ್ತಲ್ಲೇ ಮಂಡ್ಯದಲ್ಲಿರುವ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬು ಸಂಶೋಧನಾ ಸಂಸ್ಥೆ ಹಾಗೂ ಬೆಂಗಳೂರಿನಲ್ಲಿರುವ ಸಂಸ್ಥೆಯ ಆಯುಕ್ತರ ಕಚೇರಿಯನ್ನು ಕುಂದಾನಗರಿ ಬೆಳಗಾವಿಗೆ ಸ್ಥಳಾಂತರಿಸಲು ಮುಂದಾಗಿದೆ. ಸರ್ಕಾರದ ಈ ತೀರ್ಮಾನ ಇದೀಗ ಮಂಡ್ಯ ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಕಾರಣಕ್ಕೂ ಸಂಶೋಧನಾ ಸಂಸ್ಥೆ ಸ್ಥಳಾಂತರಿಸದೆ ಯಥಾಸ್ಥಿತಿ ಮುಂದುವರಿಸಬೇಕು ಎಂದು ಮಂಡ್ಯ ರೈತ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಇದನ್ನೂ ಓದಿ: ರಾತ್ರಿಯಾಗ್ತಿದ್ದಂತೆ ರಸ್ತೆಗಿಳಿಯೋ ಮೊಸಳೆ – ಜನರಲ್ಲಿ ಆತಂಕ
Advertisement
Advertisement
ಕಬ್ಬು ಸಂಶೋಧನಾ ಸಂಸ್ಥೆ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕಲ್ಪನೆಯಂತೆ ಕಳೆದು ಹದಿನೈದು ವರ್ಷದ ಹಿಂದೆ ಪ್ರಾರಂಭಿಸುವ ಮೂಲಕ ಕಬ್ಬಿನ ಹಲವಾರು ತಳಿಗಳನ್ನು ರೈತರಿಗೆ ಪರಿಚಯಿಸಲಾಗಿದೆ. ಈ ಕೇಂದ್ರದಿಂದ ಮಂಡ್ಯವಲ್ಲದೇ ಹಳೆ ಮೈಸೂರು ಭಾಗದ ರೈತರಿಗೆ, ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಆದರೆ ಇದೀಗ ಸ್ಥಳಾಂತರಿಸಿದ್ರೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಲಿದ್ದು, ಸಂಶೋಧನಾ ಸಂಸ್ಥೆ ಉಳಿವಿಗಾಗಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ಕೊಟ್ಟಿರುವ ರೈತರು, ಸದನದಲ್ಲಿ ಜಿಲ್ಲೆಯ ಶಾಸಕರು ಧ್ವನಿ ಎತ್ತದಿದ್ದರೆ ಅವರಿಗು ಘೇರಾವ್ ಹಾಕುತ್ತೇವೆ ಎನ್ನುತ್ತಿದ್ದಾರೆ. ಮೈಶುಗರ್ ಕಾರ್ಖಾನೆ ಸ್ಥಗಿತದಿಂದ ಈಗಾಗಲೇ ಕಂಗಾಲಾಗಿರುವ ಜಿಲ್ಲೆಯ ರೈತರಿಗೆ, ಕಬ್ಬು ಸಂಶೋಧನಾ ಸಂಸ್ಥೆ ಸ್ಥಳಾಂತರಗೊಳ್ಳುವ ವಿಚಾರ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ವಾಕ್ಸಿನ್ ಪಡೆದ 953 ಜನರಿಗೆ ಮತ್ತೆ ವಕ್ಕರಿಸಿದ ಕೊರೊನಾ
Advertisement