ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ (Suhas Shetty Murder Case) ಸಂಬಂಧಿಸಿದಂತೆ ಮಂಗಳೂರಿನ (Mangaluru) ಬಜಪೆ ಹಾಗೂ ಸುರತ್ಕಲ್‌ನ 14 ಕಡೆ ಎನ್‌ಐಎ (NIA) ದಾಳಿ ನಡೆಸಿದೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 10 ಕಡೆ, ಸುರತ್ಕಲ್ (Surathkal) ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್‌ಐಎ ದಾಳಿ ಮಾಡಿದೆ. ಕೊಲೆ ಆರೋಪಿಗಳು ಹಾಗೂ ಎಸ್‌ಡಿಪಿಐ ಮುಖಂಡರ ಮನೆಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್ ಬಾಂಬ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್‌ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಇದರಿಂದಾಗಿ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್‌ಐಎ ತನಿಖೆಗೆ ವಹಿಸಿತ್ತು. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್ ಏರಿಕೆ – ಡ್ಯಾಂ ಕುಸಿತ
ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ಆಗಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು. ಸುಹಾಸ್ ಶೆಟ್ಟಿ ಹತ್ಯೆ ಕೇಸ್‌ನಲ್ಲಿ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ