– 8 ಶಂಕಿತ ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಅರೆಸ್ಟ್
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಪೊಲೀಸರು (Mangaluru Police) ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಳಸ (Kalasa) ಮೂಲದವರು ಎಂದು ಗುರುತಿಸಲಾಗಿದ್ದು, ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್‌ಗೆ ಕೆಲಸ ಮಾಡಲು ಸಾಥ್ ನೀಡುತ್ತಿದ್ದರು. ಸದ್ಯ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಮಂಗಳೂರು ಪೊಲೀಸರು ಎಂಟು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಆ ಪೈಕಿ ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಎನ್‌ಐಎಗೆ ಹಸ್ತಾಂತರಿಸಲು ಅಮಿತ್ ಶಾಗೆ ಸಂಸದ ಕ್ಯಾ.ಚೌಟ ಪತ್ರ
ಕೊಲೆ ಕೃತ್ಯದಲ್ಲಿ ಭಾಗಿಯಾದವರ ಜೊತೆ ಹಿಂದೂ ಯುವಕರು ಸೇರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತು ಕುಳಿತಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಏನಿದು ಘಟನೆ?
ಸುಹಾಸ್ ಶೆಟ್ಟಿ ಬರುತ್ತಿದ್ದ ಇನ್ನೋವಾ ಕಾರನ್ನು ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರು ಹಿಂಬಾಲಿಸಿಕೊಂಡು ಬಂದಿತ್ತು. ನಂತರ ಮೀನಿನ ಟೆಂಪೋವನ್ನು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರು ಸಲೂನ್‌ಗೆ ನುಗ್ಗಿದೆ. ಬಳಿಕ ಸ್ವಿಫ್ಟ್ ಕಾರಿನಲ್ಲಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಾರ್ವಜನಿಕ ರಸ್ತೆಯಲ್ಲೇ ಸುಹಾಸ್‌ನನ್ನು ಬರ್ಬರವಾಗಿ ಕೊಲೆಗೈದು ಅಲ್ಲಿಂದ ಪರಾರಿಯಾಗಿದ್ದಾರೆ.ಇದನ್ನೂ ಓದಿ: ಫಾಜಿಲ್ ಫೋಟೊ ಜೊತೆಗೆ ಸುಹಾಸ್ ಫೋಟೊ ಹಾಕಿ ಟಾರ್ಗೆಟ್ ಫಿಕ್ಸ್ ಮಾಡಿದ್ದ ಹಂತಕರು!