ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ (Pakistan) ಮತ್ತೆ ಆತ್ಮಹತ್ಯಾ ಸ್ಫೋಟ (Suicide Blast) ನಡೆಸಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಒಬ್ಬ ಪೊಲೀಸ್ (Police) ಹಾಗೂ ಒಂದು ಮಗು (Child) ಸಾವನ್ನಪ್ಪಿದ್ದು, ಸುಮಾರು 24 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಬಲೂಚಿಸ್ತಾನದ ಬಳಿಯ ಕ್ವೆಟ್ಟಾದ ಬಲೇಲಿ ಪ್ರದೇಶದಲ್ಲಿ ಬುಧವಾರ ಪೊಲೀಸ್ ಟ್ರಕ್ ಅನ್ನು ಗುರಿಯಾಗಿಸಿಕೊಂಡು ಆತ್ಮಹತ್ಯಾ ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 20 ಪೊಲೀಸ್ ಅಧಿಕಾರಿಗಳು ಸೇರಿದಂತೆ 24 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
ವರದಿಗಳ ಪ್ರಕಾರ, ವಾಹನವೊಂದರ ಬಳಿ ಸ್ಫೋಟ ಸಂಭವಿಸಿದ್ದು, ಪಕ್ಕದಲ್ಲೇ ಚಲಿಸುತ್ತಿದ್ದ ಪೊಲೀಸ್ ಟ್ರಕ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ. ಘಟನೆ ನಡೆಯುತ್ತಲೇ ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದವರು ಧಾವಿಸಿದ್ದಾರೆ. ಸ್ಫೋಟಕ್ಕೆ 25 ಕೆಜಿ ಸ್ಫೋಟಕಗಳನ್ನು ಬಳಸಲಾಗಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಭಾರತದೊಂದಿಗಿನ ಸಂಬಂಧದಲ್ಲಿ ಹಸ್ತಕ್ಷೇಪ ಮಾಡಬೇಡಿ – ಅಮೆರಿಕಗೆ ಚೀನಾ ವಾರ್ನಿಂಗ್
Advertisement
ಕ್ವೆಟ್ಟಾ ಡಿಐಜಿ ಗುಲಾಮ್ ಅಜ್ಫರ್ ಮಹೇಸರ್ ಅವರು ಮಾಧ್ಯಮಗಳಿಗೆ ಸ್ಫೋಟವನ್ನು ಆತ್ಮಾಹುತಿ ದಾಳಿ ಎಂದು ತಿಳಿಸಿದ್ದಾರೆ. ಸ್ಥಳದಲ್ಲೇ ಆತ್ಮಹತ್ಯಾ ಬಾಂಬರ್‌ನ ಅವಶೇಷ ಕಂಡುಬಂದಿದೆ. ಸ್ಫೋಟದಿಂದಾಗಿ ಪೊಲೀಸ್ ಟ್ರಕ್ ಉರುಳಿ ಕಂದಕಕ್ಕೆ ಬಿದ್ದಿದೆ. ಸ್ಥಳದಲ್ಲಿದ್ದ ಇನ್ನೂ 2 ವಾಹನಗಳಿಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.
Advertisement
ಆತ್ಮಹತ್ಯಾ ದಾಳಿಯ ಹೊಣೆಯನ್ನು ನಿಷೇಧಿತ ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ (TTP) ಹೊತ್ತುಕೊಂಡಿದೆ. ಒಂದು ದಿನದ ಹಿಂದೆಯಷ್ಟೇ ಉಗ್ರಗಾಮಿ ಗುಂಪು ಸರ್ಕಾರದೊಂದಿಗೆ ತನ್ನ ಕದನ ವಿರಾಮವನ್ನು ಹಿಂತೆಗೆದುಕೊಂಡಿತ್ತು. ಬಳಿಕ ದೇಶಾದ್ಯಂತ ದಾಳಿಗಳನ್ನು ನಡೆಸುವಂತೆ ತನ್ನ ಸೈನಿಕರಿಗೆ ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಶ್ರದ್ಧಾ ಹತ್ಯೆ ಮಾಡಿದ್ದು ನಾನೇ, ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ – ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಫ್ತಾಬ್ ಹೇಳಿಕೆ
Live Tv
[brid partner=56869869 player=32851 video=960834 autoplay=true]