ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ (BandeMutt Basavalinga Swamji) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಯಾಗಿರುವ ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್ ನೀಡಲಾಗಿದೆ.
ಡೆತ್‍ನೋಟ್‍ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಉಲ್ಲೇಖ ಆಗಿದ್ದರಿಂದ ಮಾಗಡಿ ಪೋಲಿಸರು (Magadi Police) ನೋಟಿಸ್ ನೀಡಿದ್ದಾರೆ. ಸಚ್ಚಿದಾನಂದ ಮೂರ್ತಿಯಿಂದಲೂ ಅಪಪ್ರಚಾರ ಎಂದು ಬಸವಲಿಂಗ ಶ್ರೀಗಳು ಬರೆದಿದ್ದರು. ಹೆಸರು ಪ್ರಸ್ತಾಪ ಹಿನ್ನಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟನಲ್ಲಿ ವಿಚಾರಣೆ ನಡೆಸಲಾಗುತ್ತದೆ. ಇದನ್ನೂ ಓದಿ: ಬಂಡೇ ಮಠ ಶ್ರೀ ಆತ್ಮಹತ್ಯೆ ಪ್ರಕರಣ – ಮತ್ತೊಂದು ಪ್ರಭಾವಿ ಮಠದ ಶ್ರೀ ಭಾಗಿ?
ಪ್ರಕರಣ ಸಂಬಂಧ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಡೆತ್‍ನೋಟ್‍ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ ಆಗ್ತೀದೆ ಎಂದು ಬಸವಲಿಂಗ ಶ್ರೀ ಉಲ್ಲೇಖಿಸಿದ್ದಾರೆ. ಇದನ್ನ ಬೆನ್ನತ್ತಿರುವ ಪೊಲೀಸರು ಆ ಮತ್ತೊಬ್ಬ ಪ್ರತಿಷ್ಠಿತ ಮಠದ ಶ್ರೀಗೂ ಬಲೆ ಬೀಸಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿಚಾರಣೆ ನಡೆಸಿದ ಪೊಲೀಸರಿಗೆ ಮತ್ತಷ್ಟು ಆಶ್ಚರ್ಯಕರ ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಪ್ರಕರಣ- ನೀಲಾಂಬಿಕೆ ಮೊಬೈಲ್‍ನಿಂದ ನಿತ್ಯ ಮೆಸೇಜ್!
ಬಸವಲಿಂಗ ಶ್ರೀಗೆ ಕಿರುಕುಳ ನೀಡಿದ್ದ ಆ ಮತ್ತೊಂದು ಮಠದ ಸ್ವಾಮೀಜಿ ಯಾರು..? ಬಂಡೇಮಠಕ್ಕೂ ಆ ಮತ್ತೊಬ್ಬ ಸ್ವಾಮೀಜಿಗೂ ಏನು ಸಂಬಂಧ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಸದ್ಯ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಆ ಮತ್ತೊಬ್ಬ ಶ್ರೀಗಳನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಅದು ಪ್ರತಿಷ್ಠಿತ ಮಠವೊಂದರ ಸ್ವಾಮೀಜಿ ಎಂಬ ಮಾತುಗಳು ಸಹ ಹರಿದಾಡುತ್ತಿವೆ. ಆದ್ರೆ, ಈ ಕುರಿತು ಮತ್ಯಾವ ಸ್ವಾಮೀಜಿಯನ್ನೂ ವಿಚಾರಣೆ ನಡೆಸಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.