Connect with us

Districts

ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ!

Published

on

ಕೋಲಾರ: ಅಪರಿಚಿತ ಯುವತಿಯೊಬ್ಬಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ನಗರದ ಖಾದ್ರಿಪುರ ಗ್ರಾಮದ ರೈಲ್ವೆ ಗೇಟ್ ಬಳಿ ಈ ಘಟನೆ ನಡೆದಿದೆ. ಯುವತಿಗೆ ಸುಮಾರು 20 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ಯುವತಿ ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಯುವತಿಯ ರುಂಡ ಮತ್ತು ದೇಹ ತುಂಡಾಗಿ ಬಿದ್ದಿದೆ.

ಯುವತಿ ರಾತ್ರಿಯೇ ಇಲ್ಲಿಗೆ ಬಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತದೆ. ಇಂದು ಮುಂಜಾನೆ ಸ್ಥಳಿಯರು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಬಂಗಾರಪೇಟೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯಕ್ಕೆ ಮೃತ ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ. ಆತ್ಮಹತ್ಯೆಗೆ ನಿಖರವಾದ ಕಾರಣವೂ ತಿಳಿದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Click to comment

Leave a Reply

Your email address will not be published. Required fields are marked *