ಬಹುಕೋಟಿ ವಂಚನೆಯ ಆರೋಪಿ, ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೈಲಿನಲ್ಲಿದ್ದುಕೊಂಡೇ (Jail) ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಗೆ ಪ್ರೇಮ ಪತ್ರ (Love Letter) ಬರೆದಿದ್ದಾನೆ. ನಿನಗಾಗಿ ನಾನು ಎಂತಹ ರಿಸ್ಕ್ ತಗೆದುಕೊಳ್ಳಲೂ ರೆಡಿ ಇರುವುದಾಗಿ ತಿಳಿಸಿದ್ದಾನೆ. ಈ ಪತ್ರವನ್ನು ಜಾಕ್ವೆಲಿನ್ ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ, ಪತ್ರವನ್ನಂತೂ ಬರೆದು, ಜಾಕ್ವೆಲಿನ್ ಗೆ ಪೋಸ್ಟ್ ಮಾಡಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಡೇಟಿಂಗ್ ವಿಚಾರ ಗುಟ್ಟಾಗಿ ಉಳಿದಿರಲಿಲ್ಲ. ಇಬ್ಬರೂ ಜೊತೆಯಾಗಿ ಕಳೆದ ಖಾಸಗಿ ಫೋಟೋಗಳು ಕೂಡ ವೈರಲ್ ಆಗಿದ್ದವು. ಇವರ ಪ್ರೇಮಕ್ಕೆ ಸಾಕ್ಷಿ ಎನ್ನುವಂತೆ ಕೋಟಿ ಬೆಲೆಬಾಳುವ ಗಿಫ್ಟ್ ಪಡೆದಿದ್ದಳು ಜಾಕ್ವೆಲಿನ್. ಈ ಉಡುಗೊರೆಗಳೇ ಕೊನೆಗೆ ನಟಿಗೆ ಮುಳುವಾದವು. ಕೋರ್ಟ್ ಮೆಟ್ಟಿಲು ಕೂಡ ಹತ್ತಿಸಿದವು. ಇದನ್ನೂ ಓದಿ: ಬ್ಯಾಕ್‌ಲೆಸ್ ಫೋಟೋ ಶೇರ್, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ `ಸಲಾರ್’ ನಟಿ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್ ಬಂಧನವಾಗುತ್ತಿದ್ದಂತೆಯೇ ಜಾಕ್ವೆಲಿನ್ ಗೂ ಕೂಡ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿತ್ತು. ವಂಚನೆಯ ಹಣದಲ್ಲೇ ನಟಿಗೆ ಉಡುಗೊರೆ ನೀಡಿದ್ದಾನೆ ಎಂದು ಆರೋಪಿಸಲಾಗಿತ್ತು. ಜಾಕ್ವೆಲಿನ್ ಕೂಡ ಬಂಧನವಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ, ನಟಿ ಮಧ್ಯಂತರ ಜಾಮೀನು ಪಡೆದುಕೊಂಡರು. ಆದರೂ, ವಿಚಾರಣೆಗೆ ಹೋಗುವುದು ತಪ್ಪಲಿಲ್ಲ.
ನಂತರದ ದಿನಗಳಲ್ಲಿ ಸುಕೇಶ್ ಗೂ ತಮಗೂ ಸಂಬಂಧವಿಲ್ಲ. ಅವನಿಂದಾಗಿ ನನ್ನ ಜೀವನ ಹಾಳಾಯಿತು ಎಂದು ಜಾಕ್ವೆಲಿನ್ ಆರೋಪಿಸಿದರು. ಈಕೆ ಏನೇ ಆರೋಪ ಮಾಡಿದರೂ, ಸುಕೇಶ್ ಮಾತ್ರ ಇನ್ನೂ ಜಾಕ್ವೆಲಿನ್ ಜಪ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಪ್ರೇಮಿಗಳ ದಿನದಂದು ವಿಶ್ ಮಾಡಿದ್ದ. ಹೋಳಿ ಹಬ್ಬಕ್ಕೂ ಸುಕೇಶ್ ಶುಭಾಶಯಗಳನ್ನು ಹೇಳಿದ್ದಾನೆ. ಜೊತೆಗೆ ಪ್ರೇಮ ಸಂದೇಶ ಕಳುಹಿಸಿದ್ದಾನೆ.