ಶಿಮ್ಲಾ: ಹಿಮಾಚಲ ಪ್ರದೇಶಕ್ಕೆ (Himachal Pradesh) ನೂತನ ಮುಖ್ಯಮಂತ್ರಿಯಾಗಿ (CM) ಸುಖ್ವಿಂದರ್ ಸಿಂಗ್ ಸುಖು (Sukhvinder Singh Sukhu) ಅವರು ಭಾನುವಾರ ಶಿಮ್ಲಾದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಮಾಚಲದ ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Advertisement
ಶಿಮ್ಲಾದ ರಿಡ್ಜ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇದನ್ನೂ ಓದಿ: ಕಲಾವಿದರೊಂದಿಗೆ ಡೋಲು ಬಾರಿಸಿದ ಮೋದಿ
Advertisement
Advertisement
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ 40, ಬಿಜೆಪಿ 25 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
Advertisement
ಚುನಾವಣೆಯ ಬಳಿಕ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪತ್ನಿ, ಸಂಸದೆ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗುವ ಭಾರೀ ನಿರೀಕ್ಷೆ ಹುಟ್ಟಿಕೊಂಡಿತ್ತು. ಬಳಿಕ ಅವರು ಮುಖ್ಯಮಂತ್ರಿ ರೇಸ್‌ನಿಂದ ಹೊರಗುಳಿದರು. ಶನಿವಾರ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ಆಯ್ಕೆ ಮಾಡಿತು. ಇದನ್ನೂ ಓದಿ: ವಿರಾಟ್ ಶತಕದ ಸರದಾರ – ಸಚಿನ್ ನಂತರ 2ನೇ ಸ್ಥಾನದಲ್ಲಿ ಕೊಹ್ಲಿ