ಬೆಂಗಳೂರು: ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿ ಪುರಸ್ಕೃತ ಕನ್ನಡತಿ ಸೂಲಗಿತ್ತಿ(98) ನರಸಮ್ಮ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ ಹೆರಿಗೆ ತಜ್ಞೆಯಂತೆ 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದರು.
Advertisement
Advertisement
ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನರಸಮ್ಮ ಅವರಿಗೆ ಟ್ರೈಕ್ಯಾಸ್ಟಮಿ ಚಿಕಿತ್ಸೆ ಸಹ ನಡೆಸಲಾಗಿತ್ತು. ಕ್ರಮೇಣ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ನವೆಂಬರ್ 30ರಂದು ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆಯೊಂದಿಗೆ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
Advertisement
ತುಮಕೂರು ಭಾಗದ ಜನರು ಸೂಲಗಿತ್ತಿ ನರಸಮ್ಮ ಅವರನ್ನು ದೇವರ ಸ್ವರೂಪದಂತೆ ಕಾಣುತ್ತಾರೆ. ಇವರ ಸೇವೆಯನ್ನು ಗುರುತಿಸಿರುವ ಹಲವು ಸಂಘ ಸಂಸ್ಥೆಗಳು ಈಗಾಗಲೇ ಹಲವು ಪ್ರಶಸ್ತಿಗಳು ನೀಡಿ ಗೌರವಿಸಿವೆ. ದೇವರಾಜು ಅರಸು ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿವೆ.
Advertisement
https://youtu.be/EDUP6ymyTJ4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv