– ಡ್ಯಾಶ್‌ಬೋರ್ಡ್‌ನಲ್ಲಿ ಮಾಹಿತಿ ಡಿಲೀಟ್
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ.
Advertisement
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರಿಯಾಗಿ ಸರ್ಕಾರ ನಿರ್ವಹಿಸಲಾಗದೇ ಕೇಂದ್ರದ ಮೇಲೆ ಬೊಟ್ಟು ತೋರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸುಳ್ಳು ಹೇಳುವುದನ್ನ ಸಿಎಂ ಸ್ವಭಾವ ಮಾಡಿಕೊಂಡಿದ್ದಾರೆ. ಹಾಗಾಗಿ ನಾನು ಅವರನ್ನು ಸುಳ್ಳುರಾಮಯ್ಯ ಎನ್ನುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವ್ರು ಕೊಟ್ಟ ಕಾರ್ಡ್ ನೀಡಿದ್ರೆ ಮೈತ್ರಿ ಪಕ್ಷದಿಂದ ಗಿಫ್ಟ್
Advertisement
Advertisement
ನಾನು ಸುಳ್ಳು ಹೇಳಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಪದೇಪದೆ ಸುಳ್ಳು ಹೇಳುತ್ತಲೇ ಇರುತ್ತಾರೆ. ಹೇಳೋದೆಲ್ಲವೂ ಸುಳ್ಳೇ. ಅವರು ಹತ್ತು ಬಾರಿ ನಿವೃತ್ತಿ ಪಡೆಯಬೇಕಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: BJP- JDS ಸೀಟು ಹಂಚಿಕೆ ಇನ್ನೂ ಆಗಿಲ್ಲ: ಪ್ರಹ್ಲಾದ್ ಜೋಶಿ
Advertisement
ಎನ್‌ಆರ್‌ಡಿಫ್ (NRDF) ಫಂಡ್‌ನಲ್ಲಿ ಯುಪಿಎ ಯಾವತ್ತು ಹೆಚ್ಚು ಹಣ ಕೊಟ್ಟಿಲ್ಲ. ಆದರೆ ಹೆಚ್ಚುವರಿ ಮಾತ್ರವಲ್ಲದೆ ಅಡ್ವಾನ್ಸ್ ಹಣ ಕೊಡ್ತಿದ್ದೇವೆ. ಒಂದೇ ಒಂದು ರೂಪಾಯಿ ಜಿಎಸ್‌ಟಿ (GST) ಹಣ ಕೂಡ ಬಾಕಿ ಇಲ್ಲ. 10 ವರ್ಷ ಪ್ರಧಾನಿ ಮೋದಿ ಅವರ ಅವಧಿಯಲ್ಲಿ ಕೇಂದ್ರ ಪಾಲಿನ ತೆರಿಗೆ ಹಂಚಿಕೆಯಲ್ಲಿ 2.85 ಲಕ್ಷ ಕೋಟಿ ಕೊಟ್ಟಿದ್ದೇವೆ ಎಂದು ವಿವರಿಸಿದರು. ಇದನ್ನೂ ಓದಿ: ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ
ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ನೀಡಿದ ಅನುದಾನ ಸಂಪೂರ್ಣವಾಗಿ ಬಳಕೆ ಆಗಿಲ್ಲ. ಫೆಬ್ರವರಿ ಅಂತ್ಯ ಬಂದರೂ ಶೇ.30 ರಿಂದ 38 ರಷ್ಟು ಅನುದಾನ ಖರ್ಚು ಆಗದೇ ಉಳಿದಿದೆ ಎಂದು ಮಾಹಿತಿ ನೀಡಿದ್ದಾರೆ. ಜೊತೆಗೆ ಕೇಂದ್ರದಿಂದ ಯಾವುದೇ ವಿಶೇಷ ಅನುದಾನ ಕೊಟ್ಟಿಲ್ಲ ಎನ್ನುತ್ತಿದ್ದಾರೆ. ಆದರೆ ಕರ್ನಾಟಕ ಸರ್ಕಾರಕ್ಕೆ 50 ವರ್ಷ ಅವಧಿಗೆ 6,279 ಕೋಟಿ ರೂ. ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮದ್ಯಪ್ರಿಯರಿಗೆ ಗುಡ್ ನ್ಯೂಸ್ – ಬೆಂಗಳೂರಲ್ಲಿ 3 ದಿನ ಅಲ್ಲ, 2 ದಿನ ಮಾತ್ರ ಮದ್ಯ ಮಾರಾಟ ಬಂದ್
ಅನುದಾನ ವಿಚಾರವಾಗಿ ರಾಜ್ಯ ಸರ್ಕಾರದ ಡ್ಯಾಶ್‌ಬೋರ್ಡ್‌ನಲ್ಲಿ ಎಲ್ಲ ಮಾಹಿತಿ ಹಾಕಿದ್ದರು. ಅದನ್ನು ಡೌನ್‌ಲೋಡ್ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಿದ್ದೆ. ಅಷ್ಟರಲ್ಲಿ ಅಂಕಿ-ಅಂಶವೇ ಡಿಲೀಟ್ ಆಗಿದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇಲ್ಲ ಸಲ್ಲದ್ದನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಜೋಶಿ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ:ರಾಜ್ಯದಲ್ಲಿ ಬೇಬಿ ಅಂಬುಲೆನ್ಸ್ ಆರಂಭ – ವಿಶೇಷತೆ ಏನು?