– 15 ಮಂದಿ ಸ್ಥಿತಿ ಚಿಂತಾಜನಕ
ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಿಚ್ಚುಗುತ್ ಮಾರಮ್ಮನ ಸನ್ನಿಧಿಯಲ್ಲಿ ಪ್ರಸಾದ ದುರಂತ ನಡೆದು 2 ದಿನ ಕಳೆದೋಗಿದೆ. ಪ್ರಕಾಶ್ ಎಂಬವರ ಸಾವಿನೊಂದಿಗೆ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 15 ಜನ ಇನ್ನೂ ವೆಂಟಿಲೇಟರ್ ನಲ್ಲಿ ಸಾವು- ಬದುಕಿನ ಮಧ್ಯೆ ಹೋರಾಡ್ತಿದ್ದಾರೆ.
ಅಸ್ವಸ್ಥಗೊಂಡಿರೋ 104 ಜನ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಮಕ್ಕಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ. ಕಾವೇರಿ ಆಸ್ಪತ್ರೆಯಲ್ಲಿ 14, ಕೆ.ಆರ್.ಆಸ್ಪತ್ರೆಯಲ್ಲಿ 24, ಅಪೋಲೋ ಆಸ್ಪತ್ರೆಯಲ್ಲಿ 14, ಜೆಎಸ್‍ಎಸ್ ಆಸ್ಪತ್ರೆಯಲ್ಲಿ 13 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ರಾತ್ರಿ ಮುಜರಾಯಿ ಸಚಿವ ರಾಜಶೇಖರ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿದ್ರು. ಬಳಿಕ ಮಾತನಾಡಿ, ಈ ದೇವಸ್ಥಾನ ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲೂ ಎಚ್ಚರ ವಹಿಸುವಂತೆ ಸೂಚಿಸಿದ್ದೇನೆ ಅಂದ್ರು.
https://www.youtube.com/watch?v=_8ddjfF9ZqM
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv