Advertisements

ಸುಳ್ವಾಡಿ ವಿಷ ಪ್ರಸಾದ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಮೈಸೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆ ಆಗಿದ್ದು, ಇನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ 40 ಅಸ್ವಸ್ಥರು ಚಿಕಿತ್ಸೆ ಪಡೆಯುತ್ತಾರೆ.

Advertisements

ರಂಗನ್ (45) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕಳೆದ 9 ದಿನಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಿಸೆಂಬರ್ 14 ರಂದು ನಡೆದ ದೇವರ ಕಾರ್ಯದಲ್ಲಿ ಭಾಗವಹಿಸಿ ಪ್ರಸಾದ ಸೇವಿಸಿದ್ದರು. ಅಸ್ವಸ್ಥರಾದ ಅವರನ್ನು ಮೈಸೂರಿನ ಸುಯೋಗ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿತಯಾಗದೆ ರಂಗನ್ ಮೃತ ಪಟ್ಟಿದ್ದಾರೆ.

Advertisements

ಮೃತ ರಂಗನ್ ದೊರೆಸ್ವಾಮಿ ಮೇಡಿನ ನಿವಾಸಿಯಾಗಿದ್ದು, ಎರಡು ಹೆಣ್ಣು ಮಕ್ಕಳ ತಂದೆಯಾಗಿದ್ದಾರೆ. ಘಟನೆ ನಡೆದ ದಿನ ಪತ್ನಿ ಹಾಗೂ ಪುತ್ರಿಯೊಂದಿಗೆ ದೇವಾಲಯಕ್ಕೆ ತೆರಳಿದ್ದರು. ರಂಗನ್ ಅವರೊಂದಿಗೆ ಪ್ರಸಾದ ಸೇವಿಸಿರುವ ಪತ್ನಿ ಈಶ್ವರಿ ಅವರು ಸದ್ಯ ಮೈಸೂರಿನ ನಾರಾಯಣ ಹೃದಾಯಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪುತ್ರಿ ಅನು ಸುಯೋಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಪ್ರಮುಖ ಆರೋಪಿಗಳಾದ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ (52), ಅಂಬಿಕಾ (35), ದೇವಸ್ಥಾನದ ವ್ಯವಸ್ಥಾಪಕ ಮಾದೇಶ ಮಹದೇವಸ್ವಾಮಿ (46), ದೊಡ್ಡಯ್ಯತಂಬಡಿ (35) ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಸದ್ಯ ಆರೋಪಿಗಳನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಸಲು ಕೋರಿದ್ದ 4 ದಿನಗಳ ಕಾಲಾವಧಿಗೂ ಒಂದು ದಿನ ಮುನ್ನವೇ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಿದ್ದಾರೆ. ತನಿಖೆಯ ವೇಳೆ ಆರೋಪಿಗಳು ಘಟನೆ ಹಿಂದೆ ನಡೆಸಿದ್ದ ಪ್ಲಾನ್ ಬಹಿರಂಗಗೊಂಡಿದ್ದು, ದೇವಾಲಯದ ತಮ್ಮ ಕೈ ತಪ್ಪಿ ಹೋಗುತ್ತದೆ ಎಂಬ ಉದ್ದೇಶದಿಂದ ಇಂತಹ ಹೀನ ಕೃತ್ಯ ನಡೆಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Advertisements
Advertisements
Exit mobile version