ಚಾಮರಾಜನಗರ: ಸುಳ್ವಾಡಿಯ ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಹಾಕಿ 17 ಮಂದಿಗೆ ಸಾವಿಗೆ ಕಾರಣವಾಗಿರುವ ಆರೋಪದ ಮೇಲೆ ಬಂಧಿತರಾಗಿರುವ ಆರೋಪಿಗಳ ಪರವಾಗಿ ವಕಾಲತ್ತು ವಹಿಸಲು ಇದೀಗ ವಕೀಲರು ಮುಂದೆ ಬಂದಿದ್ದಾರೆ.
ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ವಿಷ ದುರಂತ ನಡೆದು 6 ತಿಂಗಳು ಕಳೆದಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೂ ಬಂಧಿತ ಅರೋಪಿಗಳಾದ ಇಮ್ಮಡಿ ಮಹದೇವಸ್ವಾಮೀಜಿ, ಅಂಬಿಕಾ, ಮದೇಶ್ ಹಾಗೂ ದೊಡ್ಡಯ್ಯ ಪರವಾಗಿ ವಕಾಲತ್ತು ವಹಿಸಲು ಯಾರೋಬ್ಬ ವಕೀಲರು ಕೂಡ ಮುಂದೆ ಬಂದಿರಲಿಲ್ಲ. ಇದೀಗ ಇಂದು ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಆರೋಪಿಗಳ ವಿಚಾರಣೆಯ ವೇಳೆ ಇಬ್ಬರು ವಕೀಲರು ಆರೋಪಿಗಳ ಪರವಾಗಿ ವಕಾಲತ್ತು ವಹಿಸಲು ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸುಳ್ವಾಡಿ ವಿಷಪ್ರಸಾದ ದುರಂತಕ್ಕೆ ಇಂದಿಗೆ ಒಂದು ತಿಂಗಳು- ಇನ್ನೂ ಡಿಸ್ಚಾರ್ಜ್ ಆಗಿಲ್ಲ ಅಸ್ವಸ್ಥರು
Advertisement
Advertisement
ಇಮ್ಮಡಿ ಮಹದೇವಸ್ವಾಮೀಜಿ ಪರ ಮಡಿಕೇರಿ ಮೂಲದ ವಕೀಲ ಅಪ್ಪಣ್ಣ ವಕಾಲತ್ತು ವಹಿಸಲು ಮುಂದೆ ಬಂದಿದ್ದಾರೆ. ಇನ್ನೂ ಅಂಬಿಕಾ, ಮದೇಶ್ ಹಾಗೂ ದೊಡ್ಡಯ್ಯ ಪರವಾಗಿ ವಕಾಲತ್ತು ಮಾಡಲು ಬೆಂಗಳೂರು ಮೂಲದ ಡಿ.ಪಿ.ಸದಾನಂದ ಅವರು ವಕಾಲತ್ತು ವಹಿಸಲು ಅರ್ಜಿ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಸುಳ್ವಾಡಿ ದುರಂತ- ಮಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ತಂದೆಯ ಕಣ್ಣೀರ ಕಥೆ ಓದಿ
Advertisement
ಈ ಇಬ್ಬರು ವಕೀಲರ ಪರವಾಗಿ ಅವರ ಜೂನಿಯರ್ ಗಳು ಇಂದು ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸ್ವೀಕಾರ ಮಾಡಿರುವ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿದ್ದಾರೆ.