DistrictsKarnatakaLatestMain PostMandya

ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಆಪ್ತ?

ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭೆಯಿಂದ ಸ್ಪರ್ಧಿಸಿ ಜಯಗಳಿಸಿದ್ದ ಸುಮಲತಾ ಅವರ ಆಪ್ತ ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಹೌದು. ಮುಂದಿನ ಚುನಾವಣೆ ವೇಳೆಗೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೆಲ ದಿನಗಳಿಂದ ಹರಿದಾಡುತ್ತಿದೆ. ಆದರೆ ಎಲ್ಲಿಯೂ ಸುಮಲತಾ ಬಹಿರಂಗವಾಗಿ ಈ ವಿಚಾರವನ್ನು ತಿಳಿಸಿಲ್ಲ. ಆದರೆ ಸುಮಲತಾ ಆಪ್ತ ಬಿಜೆಪಿಗೆ ಸೇರುವುದು ಬಹುತೇಕ ಖಚಿತ ಎಂಬ ಅಭಿಪ್ರಾಯ ಈಗ ವ್ಯಕ್ತವಾಗಿದೆ.

ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಂತೆಯೇ ಜಿಲ್ಲೆಯಲ್ಲಿ ರಾಜಕೀಯ ಗರಿಗೆದರಿದೆ. ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಅವರ ಹುಟ್ಟುಹಬ್ಬಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಶುಭ ಕೋರಿದ್ದಾರೆ. ಕೆಲ ದಿನಗಳಿಂದ ಇಂಡುವಾಳು ಸಚ್ಚಿದಾನಂದ ಬಿಜೆಪಿ ಸೇರುತ್ತಾರೆ ಎಂಬ ಮಾತು ಚರ್ಚೆಯಲ್ಲಿತ್ತು. ಆದರೆ ಈಗ ಈ ಮಾತಿಗೆ ಪುಷ್ಠಿ ಎನ್ನುವಂತೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ. ಈಗಾಗಲೇ ಶ್ರೀರಂಗಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಚ್ಚಿದಾನಂದ ಅವರು ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಜಾತ್ರೆಯಲ್ಲಿ ತಡೆ ಹಾಕಿದ್ರು, ಜನರ ಹೊಟ್ಟೆ ಉರಿದಿದ್ದಕ್ಕೆ ಹೀಗೆಲ್ಲಾ ಆಗಿದೆ: ಡಿಕೆಶಿ

ಹುಟ್ಟುಹಬ್ಬದ ನೆಪದಲ್ಲಿ ಇಂಡುವಾಳು ಸಚ್ಚಿದಾನಂದ ಕ್ಷೇತ್ರದ ಜನರಿಗೆ ಬಾಡೂಟ ಹಾಕಿಸಿದ್ದಾರೆ. ಇಂಡುವಾಳು ಗ್ರಾಮದಲ್ಲಿ ಭಾನುವಾರ ಭರ್ಜರಿ ಬಾಡೂಟ ಆಯೋಜನೆ ಆಗಿತ್ತು. ಸಚ್ಚಿದಾನಂದ ಅವರ ಆಪ್ತವಲಯ ಸಚ್ಚಿದಾನಂದ ಅವರು ಬಿಜೆಪಿ ಸೇರ್ಪಡೆ ಖಚಿತ ಎಂದು ಹೇಳುತ್ತಿದ್ದಾರೆ. ಬೆಂಬಲಿಗರ ಮೂಲಕ ಬಿಜೆಪಿ ಸೇರ್ಪಡೆ ಬಗ್ಗೆ ಸುಮಲತಾ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಪೊಲೀಸರ ಮೇಲೆ ಕೈ ಮಾಡೋದು, ಠಾಣೆಗೆ ನುಗ್ಗೋ ಪ್ರಯತ್ನ ಮಾಡೋದು ಅಕ್ಷಮ್ಯ ಅಪರಾಧ: ಬಿಎಸ್‍ವೈ

Leave a Reply

Your email address will not be published.

Back to top button