ಮಂಡ್ಯ: ನಟಿ ಸುಮಲತಾ ಅಂಬರೀಶ್ ಎರಡು ದಿನದಿಂದ ವಿಶ್ರಾಂತಿ ಮೊರೆ ಹೋಗಿದ್ದರು. ಆದರೆ ಈಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಸುಮಲತಾ ಅವರು ಮಂಡ್ಯಕ್ಕೆ ಇಂದು ವಾಪಸ್ಸಾಗುತ್ತಿದ್ದಾರೆ.
ಸುಮಲತಾ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ರೆಸ್ಟ್ ನಲ್ಲಿದ್ದರು. ಇಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿ ಪ್ರವಾಸ ಮಾಡಲಿದ್ದಾರೆ. ಮಧ್ಯಾಹ್ನದ ವೇಳೆಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್, ನಾಗಮಂಗಲ ಪಟ್ಟಣದಲ್ಲಿ ಪ್ರವಾಸ ಮಾಡುವ ಸಾಧ್ಯತೆ ಇದೆ. ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು ಅಂಬರೀಶ್ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ.
ಸುಮಲತಾ ಅವರು ಫೆಬ್ರವರಿ 10 ರಿಂದ ನಿರಂತರವಾಗಿ ಮಂಡ್ಯದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದರು. ಬಳಿಕ ಶುಕ್ರವಾರ ಬೆಂಗಳೂರಿಗೆ ಬಂದಿದ್ದರು. ಅತ್ತ ನಿಖಿಲ್ ಕುಮಾರಸ್ವಾಮಿ ಅವರಿಗೂ ಮಂಡ್ಯದಲ್ಲಿ ಯಾವುದೇ ಕಾರ್ಯಕ್ರಮಗಳಿಲ್ಲದೆ ಅವರು ಕೂಡ ಮಂಡ್ಯಕ್ಕೆ ಹೋಗಿರಲಿಲ್ಲ. ಹೀಗಾಗಿ ಮಂಡ್ಯದ ರಾಜಕೀಯದಲ್ಲಿ ಸ್ವಲ್ಪ ಮಟ್ಟಿನ ವಿರಾಮ ಸಿಕ್ಕಿದಂತಾಗಿತ್ತು. ಈಗ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಂಡ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv