ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಗೆ ಪರೋಕ್ಷವಾಗಿ ಬೆಂಬಲ ನೀಡುವ ಮೂಲಕ ಅವರ ಋಣ ತೀರಿಸಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
Advertisement
ಮಂಡ್ಯ ಎಂಎಲ್‍ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸುಮಲತಾ ಅವರು ಬೆಂಬಲಿಸುತ್ತಿದ್ದಾರಾ ಎಂಬ ಪ್ರಶ್ನೆ ಈಗ ಎಲ್ಲರಲ್ಲೂ ಮೂಡಿದೆ. ತನ್ನ ಬೆಂಬಲಿಗರಿಗೂ ಸಹ ಕಾಂಗ್ರೆಸ್ ಗೆ ಬೆಂಬಲವನ್ನು ನೀಡುವಂತೆ ತಿಳಿಸಿದ್ದಾರೆ ಎಂಬ ಸುಳಿವು ಸಿಗುತ್ತಿದೆ. ಏಕೆಂದರೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸುಮಲತಾ ಅವರ ಬೆಂಬಲಿಗರು ಕಾಣಿಸಿಕೊಳ್ಳುತ್ತಿದ್ದು, ಈ ಅನುಮಾನ ಬಲವಾಗುತ್ತ ಹೋಗುತ್ತಿದೆ. ಇದನ್ನೂ ಓದಿ: ಹಣಕ್ಕಾಗಿ ಬ್ಲ್ಯಾಕ್‍ಮೇಲ್ – ನಕಲಿ ಎಸಿಬಿ ಅಧಿಕಾರಿ ಅರೆಸ್ಟ್
Advertisement
ಎಂಪಿ ಚುನಾವಣೆಯಲ್ಲಿ ಸುಮಲತಾ ಅವರಿಗೆ ಕಾಂಗ್ರೆಸ್ ಪರೋಕ್ಷವಾಗಿ ಬೆಂಬಲ ನೀಡಿದ್ದು, ಕಾಂಗ್ರೆಸ್ ನಾಯಕರು ಸಹ ಚುನಾವಣೆಯಲ್ಲಿ ಅವರಿಗೆ ಸಪೋರ್ಟ್ ಮಾಡಿದ್ದರು. ಈ ಹಿನ್ನೆಲೆ ಸುಮಲತಾ ಅವರ ಗೆಲುವಿನಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರವಹಿಸಿತ್ತು.
Advertisement
Advertisement
ಈ ಪರಿಣಾಮ ಸುಮಲತಾ ಅವರು ಎಂಎಲ್‍ಸಿ ಚುನಾಚಣೆಯಲ್ಲಿ ಕಾಂಗ್ರೆಸ್‍ಗೆ ಪರೋಕ್ಷವಾಗಿ ಸಪೋರ್ಟ್ ಮಾಡಿ ಋಣ ತೀರಿಸಲು ಮುಂದಾಗಿದ್ದಾರೆ ಎಂಬ ಗುಸುಗುಸು ಮಾತು ಮಂಡ್ಯ ಜಿಲ್ಲೆಯಲ್ಲಿ ಕೇಳಿಬರುತ್ತಿದೆ.