ಬಿಜೆಪಿ ಸೇರ್ಪಡೆಗೂ ಮುನ್ನ ಅಂಬರೀಶ್ ಸ್ಮಾರಕಕ್ಕೆ ಸುಮಲತಾ ಪೂಜೆ

Public TV
1 Min Read
Sumalatha Ambareesh

ಇಂದು ಸುಮಲತಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಸುಮಲತಾ ಸೇರ್ಪಡೆ ಆಗುತ್ತಿದ್ದು, ಅದಕ್ಕೂ ಮುನ್ನ ಕಂಠೀರವ ಸ್ಡುಡಿಯೋದ ಆವರಣದಲ್ಲಿರುವ ಅಂಬರೀಶ್ (Ambareesh) ಅವರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಈಗಾಗಲೇ ಅಂಬಿ ಸಮಾಧಿಯನ್ನು ಹೂಗಳಿಂದ ಅಲಂಕಾರ ಮಾಡಲಾಗಿದೆ.

Sumalatha Ambareesh

ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ (Sumalta Ambarish), ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ (BJP) ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

Lok Sabha Election 2024 Vijayendra Meets Sumalatha Ambareesh Requests Support For Lok Sabha Election

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ.

 

ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್  2024ರ ಶುಕ್ರವಾರ ಮಧ್ಯಾಹ್ನ 12ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು  ಅವರು ಬರೆದಿದ್ದಾರೆ.

Share This Article