ನನ್ನ ಅಂಬರೀಶ್, ಒಳ್ಳೆಯ ಮಗ, ಸಹೋದರ, ಗಂಡ, ಸ್ನೇಹಿತ, ತಂದೆ, ನಟ, ರಾಜಕೀಯ ನಾಯಕ: ಪತಿಯನ್ನು ನೆನೆದು ಭಾವುಕರಾದ ಸುಮಲತಾ

Public TV
3 Min Read
sumalatha ambi collage

ಬೆಂಗಳೂರು: ನಾನು ನೋಡಿರುವಂತಹ ನನ್ನ ಅಂಬರೀಶ್, ಅವರು ಒಳ್ಳೆಯ ಮಗ, ಸಹೋದರ, ಗಂಡ, ಸ್ನೇಹಿತ, ತಂದೆ, ನಟ, ರಾಜಕೀಯ ನಾಯಕ, ಸಮಾಜ ಸೇವಕ ಆಗಿದ್ದರು. ಅವರು ಇದಕ್ಕೆಲ್ಲ ಹೆಚ್ಚಾಗಿ ಒಳ್ಳೆಯ ಮನುಷ್ಯರಾಗಿದ್ದರು ಎಂದು ಪತಿಯನ್ನು ನೆನೆದು ಸುಮಲತಾ ಭಾವುಕರಾಗಿದ್ದಾರೆ.

ಸ್ಯಾಂಡಲ್‍ವುಡ್ ದಿಗ್ಗಜ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ನುಡಿ ನಮನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸುಮಲತಾ ಪತಿಯನ್ನು ನೆನೆದು, ಅಂತ್ಯಸಂಸ್ಕಾರ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.

sumalatha ambi 2

ಅಂಬಿ ಬಗ್ಗೆ ಸುಮಲತಾ ಮಾತುಗಳು:
ಭಗವದ್ಗೀತೆಯಲ್ಲಿ ನೀನು ಬರುವಾಗ ಏನು ತಗೆದುಕೊಂಡು ಬರುತ್ತೀಯಾ. ಹೋಗುವಾಗ ಏನು ತೆಗೆದುಕೊಂಡು ಹೋಗುತ್ತಿಯಾ. ಇಲ್ಲಿ ಯಾವುದು ಶಾಶ್ವತವಲ್ಲ ಎಂದು ಭಗವಂತ ಮನುಷ್ಯನಿಗೆ ಹೇಳುತ್ತಾನೆ. ಅದಕ್ಕೆ ಮನುಷ್ಯ ನೀನು ನನಗೆ ಇಲ್ಲಿ ಕಳುಹಿಸುವಾಗ ಒಂದೇ ಒಂದು ಹೃದಯ ಮಾತ್ರ ಕಳುಹಿಸಿದ್ದೀಯಾ. ಆದರೆ ನಾನು ಇಲ್ಲಿಂದ ಹೋಗುವಾಗ ಲಕ್ಷಾಂತರ ಜನರ ಹೃದಯದಲ್ಲಿ ಮನೆ ಮಾಡಿಕೊಂಡು ಶಾಶ್ವತವಾಗಿ ಇಲ್ಲಿಯೇ ಇರುತ್ತೇನೆ. ನೀನು ನನ್ನ ಕರೆದುಕೊಂಡು ಹೋಗ್ತಿಯಾ. ಆದರೆ ನನ್ನ ಹೃದಯ ಹಾಗೂ ನನ್ನ ಮನೆ ಇಲ್ಲಿಯೇ ಇರುತ್ತದೆ ಎಂದು ನಗುತ್ತಾ ಆ ಮನುಷ್ಯ ಹೇಳುತ್ತಾನೆ. ಅಂತಹ ಮನುಷ್ಯ ನಮ್ಮ, ನಿಮ್ಮ ಪ್ರೀತಿಯ ಅಂಬರೀಶ್.

sumalatha ambi

ಅಂಬರೀಶ್ ಅವರ ಪ್ರಯಾಣದ ಬಗ್ಗೆ ಹೇಳಬೇಕೆಂದರೆ, ಅದು ನನಗಿಂತ ಚೆನ್ನಾಗಿ ಇಲ್ಲಿರುವ ಬಹಳಷ್ಟು ಜನ ಅವರನ್ನು ತುಂಬಾ ಹತ್ತಿರದಿಂದ ನೋಡಿ ತಿಳಿದುಕೊಂಡಿರುತ್ತೀರಿ. ನಾನು ಅವರನ್ನು 27 ವರ್ಷದಿಂದ ನೋಡಿದ್ದೇನೆ. ಅದನ್ನು ಹೇಳಲು ಮಾತ್ರ ಸಾಧ್ಯ. ಅವರ ಸಿನಿಮಾ ಪ್ರಯಾಣ ಶುರುವಾಗಿದ್ದು ಸುಮಾರು ವರ್ಷಗಳಾಗಿದೆ. ಅದರಲ್ಲಿ ಅವರಿಗೆ ಅನ್ನದಾತರಾಗಿದ್ದ ನಿರ್ಮಾಪಕರು, ಅವರಿಗೆ ಒಳ್ಳೆಯ ಪಾತ್ರ ನೀಡಿ ಕರ್ನಾಟಕ ಜನತೆ ಇಷ್ಟಪಡುವಂತಹ ಮೇರು ನಟ ಮಾಡಲು ಬೆಂಬಲಿಸಿದ ನಿರ್ದೇಶಕರು, ಸಹಕಲಾವಿದರು ಹಾಗೂ ಅವರನ್ನು ಪ್ರೀತಿಯಿಂದ ಸಾಕಿ ಸಲುಗಿದ ಅಭಿಮಾನಿಗಳಿಗೆ ವಂದನೆಗಳು.

ambi wedding anniversary

ಅಂಬಿ ಒಬ್ಬ ರಾಜನಾಗಿ ಬಾಳಿ, ರಾಜನಾಗಿ ನಮ್ಮನ್ನು ಅಗಲಿ ಹೋದರು. ಅವರ ಪ್ರಯಾಣದಲ್ಲಿ ರಾಜಕಾರಣದಲ್ಲಿ, ಜೀವನದಲ್ಲಿ ಸ್ನೇಹಿತರು, ಬೆಂಬಲ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು. ಅವರ ಅಂತಿಮ ಪಯಣವನ್ನು ಅರಸನಾಗಿ ಕಳುಹಿಸಿಕೊಟ್ಟಿದ್ದೀರಿ. ಅದಕ್ಕಾಗಿ ನಾನು ಸಿಎಂ ಕುಮಾರಣ್ಣ ಅವರಿಗೆ ಕೈಜೋಡಿಸಿ ನಮಸ್ಕಾರ ತಿಳಿಸುತ್ತೇನೆ.

ambi photo final

ಕುಮಾರಸ್ವಾಮಿ ಅವರು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಂಡು ಇದನ್ನು ನಡೆಸಿಕೊಟ್ಟ ರೀತಿ ಸಮಸ್ತ ನಾಡಿನ ಜನತೆ, ಅಂಬರೀಶ್ ಅವರ ಅಭಿಮಾನಿಗಳು, ಮಂಡ್ಯದ ಅಭಿಮಾನಿಗಳ ಪರವಾಗಿ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಬಿಗಿ ಭದ್ರತೆಗೆ ಕೊಟ್ಟು ನಮಗೆ ಸಹಕಾರ ನೀಡಿದ ಎಲ್ಲ ಅಧಿಕಾರಿ, ಪೊಲೀಸ್ ಇಲಾಖೆಗೆ ಹಾಗೂ ಅವರಿಗೆ ಸಾಥ್ ನೀಡಿದ ಚಿತ್ರರಂಗದ ಕುಟುಂಬದವರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಮಾಧ್ಯಮದವರು ನೀವು ಅವರನ್ನು ರಾಜಕೀಯ ನಾಯಕನಾಗಿ ಹಾಗೂ ನಟನಾಗಿ ನೋಡಿದ್ದೀರಿ. ಅವರು ಸುಂದರವಾದ ಭಾಷೆಯಲ್ಲಿ ಮಾತನಾಡಿದರು, ನೀವು ಅವರನ್ನು ತಪ್ಪು ತಿಳಿಯದೇ ಅವರನ್ನು ಪ್ರೀತಿಸಿದ್ದೀರಾ ನಿಮಗೂ ನನ್ನ ಧನ್ಯವಾದಗಳು.

AMBI SUMALATAHA

ಅವರು ಎಲ್ಲರಿಗೂ ಸ್ನೇಹಿತರಾಗಿದ್ದರು. ನಾನು ಅವರನ್ನು ಸ್ನೇಹಿತ ಎಂದು ಹೇಳಲೇ ಅಥವಾ ಗಂಡ ಎಂದು ಹೇಳಲೇ? ಎಲ್ಲದಕ್ಕಿಂತ ಹೆಚ್ಚಾಗಿ ಅವರು ನನಗೆ ತಂದೆಯಾಗಿ, ಅಣ್ಣನಾಗಿದ್ದರು. ನನ್ನ ಪ್ರಾಣಕ್ಕಿಂತ ಹೆಚ್ಚಾಗಿದ್ದರು. ಅವರು ಎಲ್ಲಿದ್ದರೂ ಅವರ ನಗುನಗುತ್ತಾ ನನಗೆ ಆಶೀರ್ವಾದ ಮಾಡುತ್ತಾರೆ. ನಾನು ಅವರನ್ನು ನನ್ನ ಅಂಬರೀಶ್ ಎಂದು ಕರೆಯುವ ಸಂದರ್ಭ ಇರಲಿಲ್ಲ. ಅವರು ಎಲ್ಲರ ಅಂಬರೀಶ್. ಅವರು ಎಲ್ಲರಿಗೂ ಬೇಕಾಗಿರುವುದು. ಅವರ ಅತ್ಯಂತ ಪ್ರಿಯರಾದ ಮಂಡ್ಯದ ಜನತೆಗೆ ದರ್ಶನ ಕೊಡಿಸಿದ್ದಕ್ಕೆ ಮಂಡ್ಯ ಜನತೆ ನಿಮ್ಮನ್ನು ಮರೆಯುವುದಿಲ್ಲ ಎಂದು ಹೇಳುತ್ತಾ ಮತ್ತೊಮ್ಮೆ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು ತಿಳಿಸಿದರು.

ambi love story 5

ಅಂಬರೀಶ್ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ ಅಂದರೆ ಬಹಳ ಗೌರವ. ಅವರು ಪಕ್ಷಾತೀತವಾಗಿದ್ದರು. ಅದೇ ರೀತಿ ನೀವು ಕೂಡ 3 ದಿನ ಕಾಲ ಕೊಟ್ಟು ಎಲ್ಲವನ್ನು ನೋಡಿಕೊಂಡಿದ್ದಕ್ಕೆ ಅವರ ಅಭಿಮಾನಿ ಹಾಗೂ ಚಿತ್ರರಂಗದ ಪರವಾಗಿ ನಾನು ಧನ್ಯವಾದ ತಿಳಿಸುತ್ತೇನೆ. ಮಗ ಅಭಿಷೇಕ್ ಮೊದಲ ಸಿನಿಮಾ ನೋಡುವ ಆಸೆಯಿತ್ತು. ಅಭಿಷೇಕ್ ಮೇಲೂ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *