ಅಂಬರೀಶ್ ಜನ್ಮದಿನಕ್ಕೆ ಸುಮಲತಾ ಅಂಬರೀಶ್ ಭಾವುಕ ಪತ್ರ

Public TV
1 Min Read
Ambarish Sumalatha

ರ್ನಾಟಕದ ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ 71ನೇ ಜನ್ಮದಿನಕ್ಕೆ ಅನೇಕರು ಶುಭಾಶಯಗಳನ್ನು ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮಂತ್ರಿ ಸುಧಾಕರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಅಂಬರೀಶ್ ಹುಟ್ಟು ಹಬ್ಬಕ್ಕೆ (Birthday) ಶುಭಾಶಯ ಹೇಳಿದ್ದಾರೆ. ಅಂಬರೀಶ್ ಪತ್ನಿ, ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha) ಭಾವುಕ ಪತ್ರವೊಂದನ್ನು (Letter) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ambarish 2

ಫೇಸ್ ಬುಕ್ ಹಾಗೂ ಟ್ವೀಟರ್ ನಲ್ಲಿ ಭಾವುಕ ಪೋಸ್ಟ್ ಮಾಡಿರುವ ಸುಮಲತಾ, ‘ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು’ ಎಂದು ಬರೆದಿದ್ದಾರೆ.

ambarish 3

ಮುಂದುವರೆದ ಪತ್ರದಲ್ಲಿ, ‘ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ’ ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.

ambarish 1

ಅಂಬರೀಶ್ ಸಿನಿಮಾ ರಂಗದ ಅಜಾತಶತ್ರು. ಹಿರಿ ಕಿರಿಯರ ಜೊತೆ ಒಳ್ಳೆಯ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಸಿನಿಮಾ ರಂಗದಲ್ಲಿ ಏನೇ ಸಮಸ್ಯೆಯಾದರೂ ಅದನ್ನು ಬಗೆಹರಿಸುವ ತಾಕತ್ತು ಕೇವಲ ಅಂಬರೀಶ್ ಅವರಿಗೆ ಮಾತ್ರವಿತ್ತು. ನೂರಾರು ಚಿತ್ರಗಳಲ್ಲಿ ನಟಿಸಿ, ಅನೇಕರ ಬದುಕಿಗೆ ಆಸರೆಯಾಗಿದ್ದರು. ಹಾಗಾಗಿ ಸಿನಿಮಾ ರಂಗ ಕೂಡ ಅಂಬಿ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದೆ.

Share This Article