ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಮೇ 24 ರಂದು ಅಂದರೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು
Advertisement
Advertisement
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9 ರಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ‘ಮೇಕೆದಾಟು ಪಾದಯಾತ್ರೆ’ ನಡೆಸಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದ ಸಂದರ್ಭದಲ್ಲೂ ಪಾದಯಾತ್ರೆ ಹಮ್ಮಿಕೊಂಡಿದ್ದ ವಿಚಾರ ಹೈಕೋರ್ಟ್ವರೆಗೂ ತಲುಪಿತ್ತು. ಹೈಕೋರ್ಟ್ ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಕೊನೆಗೊಳಿಸಲಾಗಿತ್ತು.
Advertisement
ಫೆ.27ಕ್ಕೆ ರಾಮನಗರದಿಂದ ಮತ್ತೆ ಪಾದಯಾತ್ರೆ ಆರಂಭವಾಗಿತ್ತು. 5 ದಿನಗಳ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಮಾರ್ಚ್ 3ರಂದು ಸಮಾರೋಪಗೊಂಡಿತ್ತು. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಬಣ ಇಲ್ಲ, ಹೈಕಮಾಂಡ್ ಹೇಳಿದ್ದೇ ಅಂತಿಮ: ಪರಿಷತ್ ಟಿಕೆಟ್ ಬಗ್ಗೆ ಡಿಕೆಶಿ ಮಾತು