– ಮಧ್ಯ ಭಾರತ, ದಕ್ಷಿಣ ಭಾರತದಲ್ಲಿ ಹೆಚ್ಚಿನ ತಾಪಮಾನ
ನವದೆಹಲಿ: ಏಪ್ರಿಲ್ ಆರಂಭದಲ್ಲಿಯೇ ರಾಜ್ಯದಲ್ಲಿ ಬಿಸಿಲಿನ (Sun Stroke) ತಾಪ ಹೆಚ್ಚಾಗಿದೆ. ಮುಂದಿನ 3 ತಿಂಗಳು ಬಿಸಿಲಿನ ಕಾಟ ಇರಲಿದ್ದು, ಉತ್ತರ ಒಳನಾಡಿಗೆ ಉಷ್ಣಗಾಳಿಯ ಕೆಟ್ಟ ಪರಿಣಾಮ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department) ಎಚ್ಚರಿಕೆ ನೀಡಿದೆ.
Advertisement
ಏಪ್ರಿಲ್‌ನಿಂದ ಜೂನ್‌ವರೆಗೆ ದೇಶದ ಬಹುತೇಕ ಕಡೆಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ ಹೆಚ್ಚಿರಲಿದೆ. ದೇಶದ ಮಧ್ಯಭಾಗದಲ್ಲಿ ಹಾಗೂ ದಕ್ಷಿಣ ಭಾರತದ ಪಶ್ಚಿಮ ಭಾಗದಲ್ಲಿ ಹೆಚ್ಚಿನ ತಾಪಮಾನದ ಸಾಧ್ಯತೆ ಹೆಚ್ಚಿರಲಿದೆ. ದೇಶದ ಬಹುತೇಕ ಕಡೆಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಿರುವ ಸಾಧ್ಯತೆ ಇದೆ. ಈ ಸಾಧ್ಯತೆ ದಕ್ಷಿಣ ಭಾರತದ ಮಧ್ಯಭಾಗದಲ್ಲಿ ಜಾಸ್ತಿ ಇರಲಿದೆ. ಇದನ್ನೂ ಓದಿ: ಚುನಾವಣಾ ಖರ್ಚಿಗಾಗಿ ಹೆಚ್‌ಡಿಕೆಗೆ 500 ರೂ. ಹಣ ಕೊಟ್ಟ ಅಭಿಮಾನಿ
Advertisement
Advertisement
ಗುಜರಾತ್, ಮಹಾರಾಷ್ಟ್ರದ ಮಧ್ಯಭಾಗ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಛತ್ತೀಸ್‌ಗಢದ ಉತ್ತರ ಭಾಗ ಮತ್ತು ಆಂಧ್ರ ಪ್ರದೇಶದಲ್ಲಿ ಬಿಸಿಗಾಳಿಯ ಪರಿಣಾಮವು ತೀರಾ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಿದೆ. ಮಧ್ಯ ಭಾರತ, ಉತ್ತರದ ಬಯಲು ಪ್ರದೇಶಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಭಾರತದ ಹಲವು ಕಡೆಗಳಲ್ಲಿ ಬಿಸಿಗಾಳಿಯು ಏಪ್ರಿಲ್‌ನಲ್ಲಿ ವಾಡಿಕೆಗಿಂತ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಅಮಿತ್ ಶಾ ವಿರುದ್ಧ ಗೂಂಡಾ ಪದ ಬಳಕೆ – ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್
Advertisement
ಈ ಪ್ರದೇಶಗಳಲ್ಲಿ ಬಿಸಿಗಾಳಿಯ ಪರಿಣಾಮವು ಒಂದರಿಂದ ಮೂರು ದಿನಗಳವರೆಗೆ ಇರುವುದು ವಾಡಿಕೆ. ಆದರೆ ಈ ಬಾರಿ ಅದು ಎರಡರಿಂದ ಎಂಟು ದಿನಗಳವರೆಗೆ ಇರಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: 410 ಕೋಟಿ ಒಡೆಯ ಸ್ಟಾರ್ ಚಂದ್ರು ಹೆಸರಲ್ಲಿ ಒಂದೇ ಒಂದು ಕಾರಿಲ್ಲ