ಮೈಸೂರು: ಮೈಸೂರು ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ದೊರೆತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಒಳಜಗಳದಲ್ಲಿ ಬಿಜೆಪಿಗೆ ಲಾಭವಾಗಿದ್ದು, ಇದೀಗ ಬಿಜೆಪಿಯ ಸುನಂದ್ರಾ ಪಾಲನೇತ್ರಾ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
Advertisement
ಸುನಂದಾ ಅವರು ಯಡಿಯೂರಪ್ಪ ಅವರ ಸಂಬಂಧಿಯಾಗಿದ್ದಾರೆ. ಕಳೆದ ಬಾರಿ ಸುನಂದಾ ಪಾಲನೇತ್ರಾಗೆ ಮೇಯರ್ ಗಾದಿ ನೀಡುವುದಾಗಿ ಬಿಎಸ್‍ವೈ ಭರವಸೆ ನೀಡಿದ್ದರು. ಅಂತೆಯೇ ಇದೀಗ ಸುನಂದಾ ಅವರು ಇಂದು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಎಚ್ಚರಿಕೆಯನ್ನೇ ಧಿಕ್ಕರಿಸಿ ಬಿಜೆಪಿಯಿಂದ ಮಂಡ್ಯದಲ್ಲಿ ಬೃಹತ್ ರ‍್ಯಾಲಿ!
Advertisement
Advertisement
ಮೇಯರ್ ಚುನಾವಣೆಗೆ ಮೂರು ಪಕ್ಷಗಳಿಂದಲೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮೇಯರ್ ಅಭ್ಯರ್ಥಿ ಸುನಂದಾ ಪಾಲನೇತ್ರ, ಜೆಡಿಎಸ್ ಮೇಯರ್ ಅಭ್ಯರ್ಥಿ ಅಶ್ವಿನಿ ಅನಂತ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್.ಎಂ. ಶಾಂತಕುಮಾರಿ ನಾಮಪತ್ರ ಸಲ್ಲಿಸಿದ್ದರು. ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಕೊಡದೆ ಕಾಂಗ್ರೆಸ್ ಬಹಿಷ್ಕಾರ ಹಾಕಿದೆ. ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮೈಸೂರು ಪಾಲಿಕೆಯಲ್ಲಿ ಮುರಿದುಬಿದ್ದಿದೆ.
Advertisement
ಹೀಗಾಗಿ ಬಿಜೆಪಿಗೆ ಕೊನೆಗೂ ಅದೃಷ್ಟ ಒಲಿದಿದೆ. ಮೈಸೂರು ಪಾಲಿಕೆಯ 23ನೇ ಅವಧಿಗೆ 35ನೇ ಮೇಯರ್ ಆಗಿ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ. ಸದ್ಯ ಬಿಜೆಪಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ಜೆಡಿಎಸ್ ಸದಸ್ಯರಿಂದ ಬಿಜೆಪಿ ನೂತನ ಮೇಯರ್ ಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.