Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸುನಂದಾ ಪುಷ್ಕರ್ ಪ್ರಕರಣ – 7 ವರ್ಷಗಳ ಬಳಿಕ ಶಶಿ ತರೂರ್​​​ಗೆ ರಿಲೀಫ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸುನಂದಾ ಪುಷ್ಕರ್ ಪ್ರಕರಣ – 7 ವರ್ಷಗಳ ಬಳಿಕ ಶಶಿ ತರೂರ್​​​ಗೆ ರಿಲೀಫ್

Latest

ಸುನಂದಾ ಪುಷ್ಕರ್ ಪ್ರಕರಣ – 7 ವರ್ಷಗಳ ಬಳಿಕ ಶಶಿ ತರೂರ್​​​ಗೆ ರಿಲೀಫ್

Public TV
Last updated: August 18, 2021 12:29 pm
Public TV
Share
3 Min Read
shashi tharoor sunanda pushkar A e1629269662415
SHARE

ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ದೊಡ್ಡ ರಿಲೀಫ್ ಸಿಕ್ಕಿದೆ. ದೆಹಲಿಯ ರೌಸ್ ಅವೆನ್ಯೂ ಸ್ಪೆಷಲ್ ಕೋರ್ಟ್ ಬುಧವಾರ ಸುನಂದಾ ಪುಷ್ಕರ್ ಮರಣ ಪ್ರಕರಣದಿಂದ ಶಶಿ ತರೂರ್ ಅವರನ್ನು ಖುಲಾಸೆಗೊಳಿಸಿದೆ. .

2014ರಲ್ಲಿ ದೆಹಲಿ ಹೋಟೆಲ್ ನಲ್ಲಿ ಸುನಂದಾ ಅವರ ಮೃತದೇಹ ಪತ್ತೆಯಾಗಿತ್ತು. ಸುನಂದಾ ಮರಣಕ್ಕೆ ಶಶಿ ತರೂರ್ ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳು ಕೇಳಿ ಬಂದಿದ್ದವು.

Sunanda Pushkar death 2

ಬುಧವಾರ ತೀರ್ಪು ಪ್ರಕಟವಾದ ಬಳಿಕ ಶಶಿ ತರೂರ್ ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಕಳೆದ ಏಳು ವರ್ಷಗಳ ಸಂಕಷ್ಟದಿಂದ ಮುಕ್ತಿ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ತರೂರ್ ಗೆ ಅಕ್ರಮ ಸಂಬಂಧ-ಸುನಂದಾ ಗೆಳತಿ ಹೇಳಿಕೆ:
ಸುನಂದಾ ಪುಷ್ಕರ್ ಗೆಳತಿ, ಪತ್ರಕರ್ತೆ ನಳಿನಿ ಸಿಂಗ್ ಹೇಳಿಕೆ ಈ ಪ್ರಕರಣದಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿತ್ತು. ಮೆಹರ್ ತರಾರ್ ಎಂಬ ಮಹಿಳೆ ಜೊತೆ ಶಶಿ ತರೂರ್ ಅಕ್ರಮ ಸಂಬಂಧ ಹೊಂದಿದ್ದರು. ಒಮ್ಮೆ ಶಶಿ ತರೂರ್ ಮತ್ತು ಮೆಹರ್ ದುಬೈನ ಹೋಟೆಲ್ ನಲ್ಲಿ ಮೂರು ದಿನ ಉಳಿದುಕೊಂಡಿದ್ದರು ಎಂದು ಸುನಂದಾ ನನ್ನ ಮುಂದೆ ಹೇಳಿಕೊಂಡಿದ್ದರು. ಒಮ್ಮೆ ಸುನಂದಾ ನನಗೆ ಫೋನ್ ಮಾಡಿದಾಗ ದುಃಖದಲ್ಲಿದ್ದರು. ತರೂರ್ ಮತ್ತು ಮೆಹರ್ ನಡುವೆ ಮೆಸೇಜ್ ಮೂಲಕ ಸಂಪರ್ಕ ಹೊಂದಿದ್ದರು. ಚುನಾವಣೆ ಬಳಿಕ ಸುನಂದಾಗೆ ವಿಚ್ಛೇದನ ನೀಡುವದಾಗಿ ತರೂರ್ ಮೆಸೇಜ್ ಮಾಡಿದ್ದರು ಎಂದು ನಳಿನಿ ಸಿಂಗ್ ಹೇಳಿಕೆ ದಾಖಲಿಸಿದ್ದರು. ಇದನ್ನೂ ಓದಿ:ದೇವರ ಪೂಜೆ ಬಿಟ್ಟು ಹೋಗಲ್ಲ, ತಾಲಿಬಾನ್ ಉಗ್ರರು ಕೊಂದ್ರೂ ಪರ್ವಾಗಿಲ್ಲ: ಅರ್ಚಕ

Sunanda Pushkar death 2

ದೆಹಲಿಯ ಹೋಟೆಲ್‍ನಲ್ಲಿ ಶವ:
ಜುಲೈ 17, 2014ರಂದು ದೆಹಲಿಯ ಫೈವ್ ಸ್ಟಾರ್ ಹೋಟೆಲ್ ನಲ್ಲಿ ಸುನಂದಾ ಪುಷ್ಕರ್ ಶವ ಪತ್ತೆಯಾಗಿತ್ತು. ಲಕ್ಷುರಿ ಕೋಣೆಯ ಬೆಡ್ ಮೇಲೆ ಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಸುನಂದಾ ಮರಣದ ಬಳಿಕ ಶಶಿ ತರೂರ್ ಆರೋಪಗಳು ಕೇಳಿ ಬಂದ ಹಿನ್ನೆಲೆ ದೆಹಲಿ ಪೊಲೀಸರು ಐಪಿಸಿ 498ಎ ಮತ್ತು 306ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

Sunanda Pushkar death 1

ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿತ್ತು?
* ಸುನಂದಾ ದೇಹದಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿಲ್ಲ.
* ಸುನಂದಾ ಅವರ ಮುಖ ಮತ್ತು ಕೈಗಳ ಮೇಲೆ 10ಕ್ಕೂ ಹೆಚ್ಚು ಪರಿಚಿದ ರೀತಿಯ ಗುರುತು ಕಂಡು ಬಂದಿದ್ದವು. ಆದ್ರೆ ಇದು ಪ್ರಾಣಕ್ಕೆ ಅಪಾಯ ತಂದಿದೆ ಅಂತ ಹೇಳಲು ಸಾಧ್ಯವಿಲ್ಲ.
* ವರದಿ ಪ್ರಕಾರ ಸುನಂದಾ ಅವರದ್ದು ಸಹಜ ಸಾವಲ್ಲ.
* ಸುನಂದಾ ಮರಣಕ್ಕೆ ಪ್ರಮುಖ ಕಾರಣ ಖಿನ್ನತೆಗೆ ತೆಗೆದುಕೊಳ್ಳುತ್ತಿದ್ದ ಅಲ್ಪ್ರಾಜೋಲಮ್ ಔಷಧಿಯ ಓವರ್ ಡೋಸ್ ಆಗಿರುವ ಸಾಧ್ಯತೆ.
* ತಜ್ಞರ ಪ್ರಕಾರ ಅಲ್ಪ್ರಾಜೋಲಮ್ ಔಷಧಿ ಓವರ್ ಡೋಸ್ ಮೆದುಳಿನ ಕಾರ್ಯನಿರ್ವಹಣೆ ಮೇಲೆ ನೇರ ಪರಿಣಾಮ ಬೀರುತ್ತದೆ. ಇದರಿಂದ ಮೂರ್ಛೆ ಹೋಗಬಹುದು ಅಥವಾ ಸಾವು ಸಂಭವಿಸಬಹುದು.

Sunanda Pushkar death 1

* ಪೊಲೀಸರು ಸುನಂದಾ ಅವರಿದ್ದ ಕೋಣೆಯಿಂದ ಅಲ್ಪ್ರಾಜೋಲಮ್ ಔಷಧಿಯ ಎರಡು ಖಾಲಿ ಬಾಟೆಲ್ ವಶಕ್ಕೆ ಪಡೆದುಕೊಂಡಿದ್ದರು. ಅಂದು ಅವರು ಸುಮಾರು ಅಲ್ಪ್ರಾಜೋಲಮ್ 27 ಮಾತ್ರೆ ಸೇವಿಸಿದ್ದರು. ಇದನ್ನೂ ಓದಿ: ಒಂದು ಕೇಸ್ ಪತ್ತೆ- ಮೂರು ದಿನ ನ್ಯೂಜಿಲೆಂಡ್ ಲಾಕ್‍ಡೌನ್

* ಸುನಂದಾ ಅವರ ಮರಣಕ್ಕೆ ವಿಷವೇ ಕಾರಣ. ಆದ್ರೆ ಮರಣೋತ್ತರ ವರದಿ ಇದನ್ನು ಆತ್ಮಹತ್ಯೆ ಎಂದು ದೃಢಪಡಿಸಿಲ್ಲ ಮತ್ತು ಇದರ ಬಗ್ಗೆ ಅನುಮಾನ ಸಹ ವ್ಯಕ್ತಪಡಿಸಿಲ್ಲ. ಆದ್ರೆ ವೈದ್ಯರು ಸುನಂದಾ ದೇಹದಲ್ಲಿದ್ದ ವಿಷ ಅಂಶದ ಮೂಲವನ್ನು ಖಚಿತಪಡಿಸಿಲ್ಲ.
* ಸುನಂದಾ ಅವರ ಸಾವು ಸಂಜೆ ನಾಲ್ಕರಿಂದ ಏಳು ಗಂಟೆ ಮಧ್ಯೆ ಸಂಭವಿಸಿದೆ.

pic.twitter.com/7wQqAN3ZqF

— Shashi Tharoor (@ShashiTharoor) August 18, 2021

* ಸುನಂದಾ ಪುಷ್ಕರ್ ಸಾವು ಉದ್ದೇಶಪೂರ್ವಕವಾಗಿ ಓವರ್ ಡೋಸ್ ತೆಗೆದುಕೊಂಡಿದಲ್ಲ. ಅವರ ಮಾತ್ರೆಗಳನ್ನು ಉದ್ದೇಶಪೂರ್ವಕವಾಗಿ ಓವರ್ ಡೋಸ್ ಮಾಡಲಾಗಿತ್ತು ಎಂದು ಆಂಗ್ಲ ಪತ್ರಿಕೆ ವರದಿ ಮಾಡಿತ್ತು. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

TAGGED:congresscourtPublic TVShashi TharoorSunanda PushkarSunanda Pushkar Caseಕಾಂಗ್ರೆಸ್ನ್ಯಾಯಾಲಯಪಬ್ಲಿಕ್ ಟಿವಿಶಶಿ ತರೂರ್ಸುನಂದಾ ಪುಷ್ಕರ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
19 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
20 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
30 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
1 hour ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
1 hour ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?