ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶಶಿ ತರೂರ್‌ಗೆ ನೋಟಿಸ್ ಜಾರಿ ಮಾಡಿದ್ದು ಮುಂದಿನ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ನಿಗದಿ ಮಾಡಿದೆ.
Advertisement
Advertisement
ತರೂರ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕೋರ್ಟ್ ಕ್ಲೀನ್ ಚಿಟ್ ನೀಡಿದ 90 ದಿನದ ಒಳಗಡೆ ಪೊಲೀಸರು ಪ್ರಶ್ನೆ ಮಾಡಬೇಕಿತ್ತು. ಆದರೆ 15 ತಿಂಗಳ ಬಳಿಕ ತೀರ್ಪನ್ನು ಪ್ರಶ್ನೆ ಮಾಡಲಾಗಿದೆ. ಹೀಗಾಗಿ ಅರ್ಜಿಯನ್ನು ವಿಚಾರಣೆಗೆ ಪುರಸ್ಕರಿಸಬಾರದು ಎಂದು ವಾದಿಸಿದರು.
Advertisement
ಏನಿದು ಪ್ರಕರಣ?
8 ವರ್ಷಗಳ ಹಿಂದೆ 2014ರ ಜನವರಿ 17ರಂದು ದೆಹಲಿಯ ಐಶಾರಾಮಿ ಹೋಟೆಲ್‍ನಲ್ಲಿ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಮೊದಲಿಗೆ ಇದು ಹತ್ಯೆ ಎಂದು ಭಾವಿಸಿ ಪೊಲೀಸರು ತನಿಖೆ ನಡೆಸಿದ್ದರು. ಆದರೆ ಪೊಲೀಸರು ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ನವೆಂಬರ್‌ನಲ್ಲಿ 1.45 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?
Advertisement
ಪುಷ್ಕರ್ ಆತ್ಮಹತ್ಯೆ ಮಾಡಿಕೊಳ್ಳಲು ತರೂರ್ ಪ್ರಚೋದನೆ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. 2021ರ ಆಗಸ್ಟ್ 18 ರಂದು ಈ ಪ್ರಕರಣದಲ್ಲಿ ತರೂರ್‌ಗೆ ಪಟಿಯಾಲ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು.
ಒಂದು ಜೀವವನ್ನು ಕಳೆದುಕೊಂಡಿದ್ದೇವೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ತರೂರ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪವನ್ನು ಸಾಬೀತುಪಡಿವ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು.