ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಂಚಾಯತ್ ಅಭಿವೃದ್ಧಿ ಆಧಿಕಾರಿ (PDO) ಪರೀಕ್ಷೆ ಡಿ.8 ಭಾನುವಾರ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 5:30 ರಿಂದಲೇ ಮೆಟ್ರೋ ಸಂಚಾರ (Metro Service) ಆರಂಭವಾಗಲಿದೆ.
ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಯ ಬದಲಾಗಿ ಬೆಳಗ್ಗೆ 5:30ಕ್ಕೆ ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣದಿಂದ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇದರ ಜೊತೆ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಗ್ಗೆ 5:30 ಗಂಟೆಗೆ ಹೊರಡಲಿದೆ. ಈ ಅವಧಿಯಲ್ಲಿ ಅಂದರೆ ಬೆಳಗ್ಗೆ 5:30 ರಿಂದ 7 ಗಂಟೆಯವರೆಗೆ ರೈಲುಗಳು 30 ನಿಮಿಷಗಳಿಗೊಮ್ಮೆ ಸಂಚರಿಸಲಿದೆ. ಇದನ್ನೂ ಓದಿ: ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಶಾಸಕರ ಭರ್ಜರಿ ಆಫರ್ – ಮದ್ವೆಯಾಗಲು ಅಪ್ರಾಪ್ತರಿಂದಲೂ ಅರ್ಜಿ!
ಸಾರ್ವಜನಿಕರು ಹಾಗೂ ಪರೀಕ್ಷೆಗೆ ಹೋಗುವ ಅಭ್ಯರ್ಥಿಗಳು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ. ಬೆಳಗ್ಗೆ 7 ಗಂಟೆಯ ನಂತರ ಎಂದಿನಂತೆ ರೈಲುಗಳು ಚಲಿಸುತ್ತವೆ.