ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ಅವರನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ನೇಮಿಸಿದ್ದಾರೆ.
ಓಂ ಪ್ರಕಾಶ್ ರಾವತ್ ಅವರ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಸುನಿಲ್ ಅರೋರಾ ಅವರನ್ನು ನೇಮಕ ಮಾಡಲಾಗಿದೆ. ಸುನಿಲ್ ಅವರಿಗೆ ಇಂದು ಅಧಿಕಾರ ಹಸ್ತಾಂತರಿಸಲಾಗಿದ್ದು, ಅಕ್ಟೋಬರ್ 2021ರವೆರೆಗೆ ಕಾರ್ಯನಿರ್ವಹಿಸಲಿದ್ದಾರೆ. ಸುನಿಲ್ ಅರೋರಾ ಅವರು 2017 ಆಗಸ್ಟ್ 31ರಂದು ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದರು.
Advertisement
ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಜಮ್ಮು-ಕಾಶ್ಮೀರ, ಓಡಿಶಾ, ಮಹಾರಾಷ್ಟ್ರ, ಹರಿಯಾಣ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
Advertisement
Advertisement
ಸುನಿಲ್ ಅರೋರಾ ಅವರು 1980ರ ಬ್ಯಾಚ್‍ನ ರಾಜಸ್ಥಾನದ ಐಎಎಸ್ ಅಧಿಕಾರಿಯಾಗಿದ್ದಾರೆ. 1993-1998ರವರೆಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕೇಂದ್ರ ಹಣಕಾಸು, ಯೋಜನಾ ಆಯೋಗ ಹಾಗೂ ಜವಳಿ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೌಶಲ್ಯಾಭಿವೃದ್ಧಿ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
Advertisement
ಅಧಿಕಾರ ಸ್ವೀಕರಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸುನಿಲ್ ಅರೋರಾ ಅವರು, 2019ರ ಲೋಕಸಭಾ ಚುನಾವಣೆಗಾಗಿ ಆಂತರಿಕ ಸಿದ್ಧತೆಗಳನ್ನು ಆಯೋಗ ಆರಂಭಿಸಿದೆ. ಪ್ರತಿಯೊಬ್ಬರೂ ಮತದಾನ ಮಾಡುವ ಹಕ್ಕನ್ನು ಹೊಂದುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.
Delhi: Sunil Arora takes charge as the new Chief Election Commissioner of India pic.twitter.com/7ruBbg5MN5
— ANI (@ANI) December 2, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv