ಬೆಂಗಳೂರು: ಇಂದು ರವಿ ಬೆಳಗೆರೆ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ರವಿ ಬೆಳಗೆರೆ ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಸುನಿಲ್ ಹೆಗ್ಗರವಳ್ಳಿ ಅರ್ಜಿ ಸಲ್ಲಿಸಿರೋ ಹಿನ್ನೆಲೆಯಲ್ಲಿ ವಿಚಾರಣೆ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಶನಿ ಮುಖಿ ಕೊಲೆಗೆ ಸುಪಾರಿ ಒಂದು ಕೇಡು – ನೋಟ್ಸ್ ಫ್ರಮ್ ಸೆಂಟ್ರಲ್ ಜೈಲ್
ಇತ್ತೀಚೆಗಷ್ಟೇ 65ನೇ ಸಿಟಿ ಸಿವಿಲ್ ನ್ಯಾಯಾಲಯ ರವಿ ಬೆಳಗೆರೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡಿತ್ತು. ಆದ್ರೆ ರವಿ ಬೆಳಗೆರೆ ಆರೋಗ್ಯ ಸರಿ ಇರುವ ಬಗ್ಗೆ ಕೋರ್ಟ್‍ಗೆ ದಾಖಲೆ ಸಲ್ಲಿಸಲು ಸುನಿಲ್ ಹೆಗ್ಗರವಳ್ಳಿ ಹೇಳಿದ್ದಾರೆ. ಹೀಗಾಗಿ ನ್ಯಾಯಾಲಯ ಕೊಟ್ಟಿದ್ದ ಮಧ್ಯಂತರ ಜಾಮೀನನ್ನು ಮುಂದುವರಿಸುತ್ತಾ? ಅಥವಾ ರದ್ದುಗೊಳಿಸುತ್ತಾ ಅನ್ನೋದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಬೆಳಗೆರೆಗೆ ಜಾಮೀನು ಮಂಜೂರು: ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?
Advertisement
Advertisement
ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ರಕರ್ತ ರವಿ ಬೆಳಗೆರೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಯಾವುದೋ ಯೋಚನೆಯಲ್ಲಿ ಮಗ್ನರಾಗಿರುವ ರವಿ ಬೆಳಗೆರೆ, ಪ್ರತಿನಿತ್ಯ 26 ಮಾತ್ರೆಗಳನ್ನು ನುಂಗುತ್ತಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ವೇಳೆ ರವಿ ಬೆಳಗೆರೆ ಪಿತ್ತಕೋಶದಲ್ಲಿ ಕಲ್ಲು ಪತ್ತೆಯಾಗಿದ್ದು, ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಅಂತಾ ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆ
Advertisement
Advertisement