-ಸೆಪ್ಟೆಂಬರ್ 1 ರಿಂದ ಉಡುಪಿಯಲ್ಲಿ ಶಾಲಾರಂಭ
ಉಡುಪಿ: ಗಣೇಶೋತ್ಸವ ಆಚರಣೆ ಬಗ್ಗೆ ಜನರ ಬೇಡಿಕೆ ಇದೆ. ಸಾರ್ವಜನಿಕರ, ಭಕ್ತ ಜನರ ಬೇಡಿಕೆ ಸರಿಯಾಗಿದೆ. ಆದರೆ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಮೊದಲ ಆದ್ಯ ಕರ್ತವ್ಯ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸೂಚನೆ ನೋಡಬೇಕು. ತಜ್ಞರು ಹೇಳಿರುವ ವಿಚಾರಗಳನ್ನು ಗಮನಿಸಬೇಕು. ತಜ್ಞರ ಅಭಿಪ್ರಾಯ ನೋಡಿ ಆಚರಣೆಗೆ ಅವಕಾಶ ನೀಡುತ್ತೇವೆ. ಇದನ್ನು ಅರ್ಥ ಮಾಡಿಕೊಂಡು ಜನರು ಸಹಕರಿಸಬೇಕು ಎಂದು ನುಡಿದಿದ್ದಾರೆ. ಇದನ್ನೂ ಓದಿ:ಜೀನ್ಸ್ ಪ್ಯಾಂಟ್‍ಗೆ ಪೇಂಟ್ ನಂತೆ ಚಿನ್ನದ ಲೇಪನ- ಕಳ್ಳನ ಮಾಸ್ಟರ್ ಪ್ಲ್ಯಾನ್
ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಿದ ಕಾರಣಕ್ಕೆ ತರಗತಿಗಳು ಆರಂಭವಾಗಿರಲಿಲ್ಲ. ಈಗ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಸೋಂಕು ಹತೋಟಿಗೆ ಬರುತ್ತಿದೆ. ಇದೊಂದು ಆಶಾದಾಯಕ ಬೆಳವಣಿಗೆ. ಕಳೆದ ಮೂರು ದಿನಗಳಲ್ಲಿ ಪಾಸಿಟಿವಿಟಿ ರೇಟ್ ಶೇ.1.4 ಇದೆ. ಈ ಹಿನ್ನೆಲೆಯಲ್ಲಿ ಶಾಲಾರಂಭ ಮಾಡುತ್ತೇವೆ ಎಂದಿದ್ದಾರೆ.
9ನೇ ತರಗತಿಯಿಂದ ದ್ವಿತೀಯ ಪಿಯುವರೆಗೆ ಶಾಲಾರಂಭ ಮಾಡುತ್ತೇವೆ. ಈ ಬಗ್ಗೆ ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ. ಸೆಪ್ಟಂಬರ್ 1ರಿಂದ ತರಗತಿಗಳು ಆರಂಭವಾಗಲಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಎಚ್ಚರಿಕೆಯಿಂದ ಗಮನಿಸಬೇಕು. ಶಿಕ್ಷಕರಿಗೆ ಲಸಿಕೆ ಕಡ್ಡಾಯ ಮಾಡಬೇಕು. ಕೋವಿಡ್ ನಿಯಮಾವಳಿ ಅರ್ಥೈಸಿಕೊಂಡು ತರಗತಿ ಆರಂಭಿಸಿ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬಿಕಿನಿಯಲ್ಲಿ ಪ್ರಿಯಾಂಕಾ ಚೋಪ್ರಾ – ಚಾಕು ಹಿಡಿದ ನಿಕ್