ಬೆಂಗಳೂರು: ರಾಷ್ಟ್ರಭಕ್ತರಾದ ವೀರ ಸಾರ್ವರ್ಕರ್ ಮತ್ತು ಹೆಡ್ಗೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ (Congress) ಸರ್ಕಾರ ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ಎಂದು ಬಿಜೆಪಿ (BJP) ಶಾಸಕ ಸುನೀಲ್ ಕುಮಾರ್ (Sunil Kumar) ಪ್ರಶ್ನಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಫ್‌ಸಿಐ ನೀತಿ ಬದಲಾವಣೆ ಹಿನ್ನೆಲೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ಸಾಧ್ಯವಿಲ್ಲ: ಅಶೋಕ್ ಕುಮಾರ್ ಮೀನಾ ಸ್ಪಷ್ಟನೆ
Advertisement
Advertisement
ದೇಶಭಕ್ತ ಸ್ವಾತಂತ್ರ‍್ಯ ಹೋರಾಟಗಾರರ ಪಠ್ಯ ತೆಗೆಯಿರಿ ಎಂದು ನಕಲಿ ಗಾಂಧಿ ಪಾರಿವಾರ ನೀಡಿದ ಆದೇಶವನ್ನು ಪಾಲನೆ ಮಾಡುತ್ತಿದ್ದೀರಾ? ಮತಾಂಧ ಟಿಪ್ಪು, ದೇಶದ್ರೋಹಿ ಔರಂಗಜೇಬ್, ಅಧಿನಾಯಕಿ ಇಟಲಿ ಮೇಡಂ ಪಠ್ಯವನ್ನು ಸೇರಿಸಿ ಹೊಸ ಇತಿಹಾಸ ಬರೆಯುತ್ತೀರಾ ಎಂದು ಪ್ರಶ್ನಿಸಿ ಸಂಪುಟದಲ್ಲಿ ತೆಗೆದುಕೊಂಡ ಎರಡು ನಿರ್ಣಯದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ವೇದವ್ಯಾಸ ಕಾಮತ್ ಎಚ್ಚರಿಕೆ
Advertisement
ಕನ್ನಡಿಗರು ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ (Bengaluru) ‘ಲೂಲು ಮಾಲ್’ ಕಟ್ಟಿದವರ ಇತಿಹಾಸವನ್ನೂ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸ್ಸಿಗರು ಹೇಳಿಕೊಡಬಹುದು. ಮಂಗಳೂರು (Mangaluru) ಕುಕ್ಕರ್ ಸ್ಫೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಈ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
Advertisement
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂಧರ ನಿಷೇಧ ಕಾಯ್ದೆ (Anti Conversion Law) ವಾಪಸ್ ತೆಗದುಕೊಳ್ಳುತ್ತದೆ ಎಂದು ನಾವು ಮೊದಲೇ ಎಚ್ಚರಿಸಿದ್ದೆವು. ಈಗ ಅದನ್ನು ನಿಜ ಮಾಡುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಬದಿಗಿಟ್ಟಿದೆ. ಇಡೀ ರಾಜ್ಯಕ್ಕೆ ಹಿಜಬ್ ತೊಡಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ