– ರಾಜಕೀಯ ದುರುದ್ದೇಶದಿಂದ ಹರೀಶ್ ಪೂಂಜ ಬಂಧನದ ಹುನ್ನಾರ
– ಪ್ರಜ್ವಲ್ ಪರಾರಿಯಾಗುವಾಗ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು?
ಉಡುಪಿ: 24 ಗಂಟೆಯೊಳಗಾಗಿ ರಘುಪತಿ ಭಟ್ (Raghupathi Baht) ಅವರು ವಿಧಾನಪರಿಷತ್ ಚುನಾವಣಾ ಕಣದಿಂದ ನಿವೃತ್ತರಾಗದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಅನಿವಾರ್ಯ ಎಂದು ಬಿಜೆಪಿ (BJP) ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ (Sunil Kumar) ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿ (Udupi) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಘುಪತಿ ಭಟ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಚುನಾವಣಾ (Election) ಕಣಕ್ಕೆ ಇಳಿದಿದ್ದಾರೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಏನು ಬೇಕೋ ಅದನ್ನೆಲ್ಲ ನಾವು ಪಕ್ಷದ ವತಿಯಿಂದ ಮಾಡುತ್ತೇವೆ. ರಘುಪತಿ ಭಟ್ ಆಗಲಿ ಯಾರೇ ಆಗಲಿ, ಪಕ್ಷಕ್ಕೆ ಮುಜುಗರ ತರುವ ಕೆಲಸವನ್ನು ಯಾರೇ ಮಾಡಿದರೂ ಪಕ್ಷ ಶಿಸ್ತುಕ್ರಮ ತೆಗೆದುಕೊಳ್ಳುತ್ತದೆ. ಅವರಿಗೆ ಇನ್ನೂ ಕಾಲಾವಕಾಶ ಇದೆ, ಅವರು ಕಣದಿಂದ ನಿವೃತ್ತಿ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಿಚಾರಣೆಗೆ ಬಾರದ ಭವಾನಿ ರೇವಣ್ಣ- ಸರ್ಕಾರದ ವಿರುದ್ಧ ಜೆಡಿಎಸ್ MLC ಕಿಡಿ
- Advertisement
- Advertisement
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮದ ವಿಚಾರವಾಗಿ, ರಾಜಕೀಯ ದುರುದ್ದೇಶದ ಬಂಧನದ ಹುನ್ನಾರ ನಡೆಸಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ. ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ವ್ಯವಸ್ಥೆಗೆ ಮಾರಕ. ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವ ಯಾವುದೇ ಘಟನೆ ನಡೆದಿರಲಿಲ್ಲ. ವಿನಾಕಾರಣ ರಾಜಕೀಯ ದ್ವೇಷದಿಂದ ಬಂಧನಕ್ಕೆ ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ಮುಂದಿನ ವಾರ ಗೃಹ ಸಚಿವರನ್ನು ಭೇಟಿ ಮಾಡುತ್ತೇವೆ. ಜಿಲ್ಲೆಯ ಶಾಂತಿಯನ್ನು ಕದಡುವ ಪ್ರಯತ್ನ ಪೊಲೀಸರಿಂದ ನಡೆಯುತ್ತಿದೆ. ಈ ಬಗ್ಗೆ ಗೃಹ ಸಚಿವರಿಂದ ಸ್ಪಷ್ಟನೆ ಕೇಳುತ್ತೇವೆ. ಅಧಿವೇಶನದಲ್ಲಿ ನಿಶ್ಚಿತವಾಗಿ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ. ಒಬ್ಬ ಶಾಸಕನನ್ನು ಬೆದರಿಸುವ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಮಟ್ಟ ಹಾಕುವ ಹುನ್ನಾರ ಇದು. ಕಾರ್ಯಕರ್ತರು ಯಾವುದೇ ರೀತಿಯಲ್ಲಿ ಹೆದರುವ ಅಗತ್ಯ ಇಲ್ಲ. ಕಾರ್ಯಕರ್ತರ ರಕ್ಷಣೆಗೆ ಪಕ್ಷ ಸಿದ್ಧವಿದೆ. ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಪೊಲೀಸರ ಮುಖಾಂತರ ದಬ್ಬಾಳಿಕೆ ಮಾಡುತ್ತಿದ್ದಾರೆ. ಯಾರಿಗೂ ಕೂಡ ಅಧಿಕಾರ ಶಾಶ್ವತ ಅಲ್ಲ ಎಂದು ಅವರು ಹೆಳಿದ್ದಾರೆ.
ಪ್ರಜ್ವಲ್ (Prajwal Revanna) ಪಾಸ್‍ಪೋರ್ಟ್ ಸೀಸ್ ಮಾಡಲು ಕೇಂದ್ರ ಸರ್ಕಾರ ನಿರಾಸಕ್ತಿ ಎಂಬ ಗೃಹ ಸಚಿವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸುನೀಲ್ ಕುಮಾರ್, ಇಷ್ಟೆಲ್ಲಾ ಘಟನೆಗಳಾಗುವಾಗ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಈ ಬಗ್ಗೆ ರಾಜ್ಯ ಗುಪ್ತಚರ ಇಲಾಖೆ ಏನೂ ಮಾಡಿಲ್ಲ. ವಿದೇಶಕ್ಕೆ ಪರಾರಿಯಾಗುವಾಗ ಕೈಕಟ್ಟಿ ಕುಳಿತಿದ್ದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಪ್ರಜ್ವಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಿಜೆಪಿಯ ಸಹಮತ ಇದ್ದೇ ಇದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಹೆಣ್ಣು ಮಕ್ಕಳಿಗೆ ಯಾರೂ ಅಗೌರವ ತೋರಿಸಬಾರದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಇಬ್ಬರು ಸಿಎಂ ಅರೆಸ್ಟ್ ಆದ್ರು.. ಬುಡಕಟ್ಟು ಸಿಎಂ ಇನ್ನೂ ಜೈಲಲ್ಲೇ ಇದ್ದಾರೆ: ರಾಹುಲ್ ಗಾಂಧಿ