ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಜೈಲಿನಿಂದಲೇ ಇದೀಗ ಮತ್ತೊಂದು ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಮುಖ್ಯಮಂತ್ರಿಗಳು ತಮ್ಮ ಎಲ್ಲಾ ಶಾಸಕರಿಗೆ ಸಂದೇಶವನ್ನು ರವಾನಿಸಿದ್ದಾರೆ.
CM @ArvindKejriwal जी का AAP विधायकों के लिए दिया संदेश Smt. @KejriwalSunita जी ने पढ़ा:
“मेरे जेल में होने से दिल्ली के लोगों को किसी भी तरह की परेशानी नहीं होनी चाहिए।
हर विधायक हर दिन अपने क्षेत्र का दौरा करे और लोगों की समस्याओं पर चर्चा कर उनका समाधान करे।
दिल्ली की 2… pic.twitter.com/njEsNpUgzN
— AAP (@AamAadmiParty) April 4, 2024
- Advertisement -
ಈ ಪತ್ರವನ್ನು ಇಂದು ಸುದ್ದಿಗೋಷ್ಠಿ ನಡೆಸಿ ಪತ್ನಿ ಸುನಿತಾ ಕೇಜ್ರಿವಾಲ್ (Sunita Kejriwal) ಅವರು ಮಾಧ್ಯಮಗಳ ಮುಂದೆ ಓದಿದ್ದಾರೆ. ನಾನು ಜೈಲಿನಲ್ಲಿರುವ ಕಾರಣ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.
- Advertisement -
- Advertisement -
ಪತ್ರದಲ್ಲಿ ಏನಿದೆ..?: ತಮ್ಮ ಗೈರುಹಾಜರಿಯಲ್ಲಿ ದೆಹಲಿ ಜನ ಯಾವುದೇ ತೊಂದರೆಗಳನ್ನು ಎದುರಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆಪ್ (AAP) ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜೈಲು ಸೇರಿದ ಕೇಜ್ರಿವಾಲ್ 4.5 ಕೆಜಿ ಕಳೆದುಕೊಂಡಿದ್ದಾರೆ: ಆಪ್ ಗಂಭೀರ ಆರೋಪ
- Advertisement -
ನಾನು ಜೈಲಿನಲ್ಲಿರುವ ಮಾತ್ರಕ್ಕೆ ದೆಹಲಿಯ ಜನರು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಬಾರದು. ಪ್ರತಿಯೊಬ್ಬ ಶಾಸಕರು (Delhi MLA) ಪ್ರತಿದಿನ ತಮ್ಮ ಪ್ರದೇಶಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.
ಮದ್ಯ ಹಗರಣಕ್ಕೆ (Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾದ ಕೇಜ್ರಿವಾಲ್ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸೋಮವಾರ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಮುಖ್ಯಮಂತ್ರಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯ ಆಹಾರವನ್ನು ನೀಡಲಾಗುತ್ತದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಗಾಗಿ ಅವರ ಸೆಲ್ ಬಳಿ ಕ್ವಿಕ್ ರೆಸ್ಪಾನ್ಸ್ ತಂಡವನ್ನು ನಿಯೋಜಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.